ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷ ಆರೋಪ ಮಾಡಿ ಹೈಕೋರ್ಟ್ ಗೆ ನಿಖಿಲ್ ಕುಮಾರಸ್ವಾಮಿ ಸಾರ್ವಜನಿಕ ಹಿತಾಸಕ್ತಿ ದೂರು (PIL) ಸಲ್ಲಿಕೆ ಮಾಡಿದ್ದಾರೆ.
ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಪಿಐಎಲ್ ಸಲ್ಲಿಸಿದ್ದಾರೆ. ಆಧುನಿಕ ತಂತ್ರಜ್ಙಾನ ಬಳಸಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿ ಆಮಿಷ ಒಡ್ಡಲಾಗಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಾಗುತ್ತಿಲ್ಲ. ಕರ್ನಾಟಕ ಮಾಡೆಲ್ ಇನ್ನೆಲ್ಲೂ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.
Advertisement
Advertisement
ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್ ಗೆ ಅರ್ಜಿಯನ್ನು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮಾಡಿದ್ರು. ನಿಖಿಲ್ ಅರ್ಜಿ ವಿಚಾರಣೆ ಮಾಡಿದ ಸಿಜೆ ಪಿ.ಎಸ್. ದಿನೇಶ್ ಕುಮಾರ್, ಟಿ.ಜಿ.ಶಿವಶಂಕರೇಗೌಡ ಅವರಿದ್ದ ಪೀಠವು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿ ಆದೇಶ ನೀಡಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಆದ ಅನ್ಯಾಯ ಪ್ರಶ್ನಿಸುವ ಹಕ್ಕು ನನಗಿದೆ: ಡಿಕೆ ಸುರೇಶ್