ಮಂಡ್ಯ: ಕುಟುಂಬ ರಾಜಕಾರಣದ ವಿರುದ್ಧ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ಹೊರ ಹಾಕಿದ್ದಾರೆ.
ಮಂಡ್ಯ ನಗರದ ಗುತ್ತಲು ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಲು ನಿಖಿಲ್ ಕುಮಾರಸ್ವಾಮಿ ಹೊರಟಿದ್ದರು. ಮಾರ್ಗಮಧ್ಯದಲ್ಲಿ ಮಾತನಾಡಿದ ಅವರು, ರಾಮನಗರ ಅಥವಾ ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ತಿಳಿಸಿದರು. ಇದನ್ನು ಓದಿ: ಕುಮಾರಸ್ವಾಮಿ ಮಕ್ಕಳು, ಮೊಮ್ಮಕ್ಕಳು ಮಾತ್ರ ಶಾಸಕರಾಗಬೇಕೇ- ಸಾಹಿತಿ ವೀರಭದ್ರಪ್ಪ ಪ್ರಶ್ನೆ
Advertisement
Advertisement
ಗುತ್ತಲು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ರಫಿ, ರಾಹುಲ್, ಶಶಾಂಕ್ ಹಾಗೂ ಗಿರಿಜಮ್ಮ ಕುಟುಂಬಕ್ಕೆ ನಿಖಿಲ್ ಕುಮಾರಸ್ವಾಮಿ ಸಾಂತ್ವಾನ ಹೇಳಿದರು. ಎರಡು ವರ್ಷದಲ್ಲಿ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ನಮಗೆ ಆಸ್ತಿ ಬೇಡ, ಏನೂ ಬೇಡ ಮಗ ಬೇಕು ಎಂದು ಮೃತ ಶಶಾಂಕ್ ಕುಟುಂಬಸ್ಥರು ಅಳಲು ತೋಡಿಕೊಂಡು, ನಿಖಿಲ್ ಕಾಲಿಗೆ ಬೀಳಲು ಮುಂದಾದರು. ಆಗ ಅವರನ್ನು ತಡೆದ ನಿಖಿಲ್, ಸಾಂತ್ವಾನ ಹೇಳಿದರು. ಇದನ್ನು ಓದಿ: ಮಂಡ್ಯದಲ್ಲಿ ಲಾರಿ ಹರಿದು ಐವರು ಪಾದಚಾರಿಗಳ ದಾರುಣ ಸಾವು
Advertisement
ಶಶಾಂಕ್ ಮತ್ತು ರಾಹುಲ್ ಮನೆಯ ಓರ್ವ ಸದಸ್ಯರಿಗೆ ಎಲ್ಲಿಯಾದರೂ ಉದ್ಯೋಗ ಕೊಡಿಸುವ ಭರವಸೆ ನೀಡಿದರು. ಜೊತೆಗೆ ಕುಟುಂಬ ನಿರ್ವಹಣೆಗೆ ಅಂತ ಒಂದಿಷ್ಟು ಆರ್ಥಿಕ ನೆರವು ನೀಡಿದ್ದಾರೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದವರ ಭೇಟಿಗೆ ಮುಂದಾದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv