ರಾಮನಗರ: ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಬೇಡ, ಇನ್ನೂ ಮೂರು ವರ್ಷ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ ಮಹೇಶ್ (SR Mahesh) ಹೇಳಿಕೆ ನೀಡಿದ್ದಾರೆ.
ಬಿಡದಿಯ (Bidadi) ಹೆಚ್‌ಡಿಕೆ (HD Kumaraswamy) ತೋಟದ ಮನೆಯಲ್ಲಿ ನಡೆದ ಜೆಡಿಎಸ್ (JDS) ಸಭೆಯಲ್ಲಿ ಭಾಗಿಯಾಗಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಚನ್ನಪಟ್ಟಣ (Channapatna) ಹೆಚ್‌ಡಿ ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾಗಿದೆ. ಈಗ ಎನ್‌ಡಿಎ ಅಭ್ಯರ್ಥಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು. ಇವತ್ತು ಪೂರ್ವಭಾವಿಯಾಗಿ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ಆಯ್ಕೆ ಬಗ್ಗೆ ಎರಡೂ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಬೇಕು ಅಷ್ಟೇ. ಕಾಂಗ್ರೆಸ್ ಸರ್ಕಾರ ಸಾಕಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದ ಜನ ಬೇಸತ್ತಿದ್ದಾರೆ. ಹಾಗಾಗಿ ಈ ಮೂರು ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು. ಇದನ್ನೂ ಓದಿ: ಧಾರವಾಡ| ಮಳೆ ಅವಾಂತರ- ಕೊಚ್ಚಿ ಹೋಯ್ತು ನಿರ್ಮಾಣ ಹಂತದಲ್ಲಿದ್ದ ರಸ್ತೆ
- Advertisement
ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹೆಚ್ಚಳದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಸಾಕಷ್ಟು ಜನ ನನಗೂ ಕರೆ ಮಾಡಿ ಈ ಬಗ್ಗೆ ಮಾತನಾಡಿದ್ದಾರೆ. ಕಾರ್ಯಕರ್ತರ ಒತ್ತಡ ಇದ್ದರೂ ಅದನ್ನು ತೀರ್ಮಾನ ಮಾಡೋದು ನಿಖಿಲ್. ನಿಖಿಲ್ ಕುಮಾರಸ್ವಾಮಿ ಕೂಡ ಈ ಬಗ್ಗೆ ನನ್ನ ಜೊತೆ ಅನೇಕ ಬಾರಿ ಮಾತನಾಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಬೇಡ, ಸಂಘಟನೆ ಮಾಡಬೇಕು ಎಂದಿದ್ದಾರೆ. ಕುಮಾರಸ್ವಾಮಿ ಕೂಡ ದೆಹಲಿಯಲ್ಲಿ ಇರುತ್ತಾರೆ. ಇರೋ ಮೂರೂವರೆ ವರ್ಷದಲ್ಲಿ ನಿಖಿಲ್ ಪಕ್ಷ ಸಂಘಟನೆ ಮಾಡಬೇಕು. ಹಾಗಾಗಿ ವೈಯಕ್ತಿಕವಾಗಿ ಚುನಾವಣೆಗೆ ಆಸಕ್ತಿ ಇಲ್ಲ ಎಂದಿದ್ದಾರೆ. ಈ ಬಗ್ಗೆ ನಿಖಿಲ್ ಅನೇಕ ಬಾರಿ ಚರ್ಚೆ ಮಾಡಿದ್ದಾರೆ. ಮೈತ್ರಿ ಪಕ್ಷ ಏನು ತೀರ್ಮಾನ ಮಾಡುತ್ತೋ ನೋಡೊಣ ಎಂದು ತಿಳಿಸಿದರು. ಇದನ್ನೂ ಓದಿ: Lokmanya Tilak Express | ಇಂಜಿನ್ ಸೇರಿ ಹಳಿತಪ್ಪಿದ 8 ಬೋಗಿಗಳು
- Advertisement