ರಾಮಮಂದಿರ ಉದ್ಘಾಟನೆಗೆ ನಿಖಿಲ್ ಗೆ ಬಂತು ಆಹ್ವಾನ

Public TV
1 Min Read
Inauguration

ಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ (Nikhil Kumar) ಅವರಿಗೆ ರಾಮಮಂದಿರ ಉದ್ಘಾಟನೆಗೆ ಬರುವಂತೆ ಆಹ್ವಾನ ನೀಡಲಾಗಿದೆ. ಜನವರಿ 22 ರಂದು ನಡೆಯಲಿರುವ ಉದ್ಘಾಟನೆಗೆ ಕುಟುಂಬ ಸಮೇತ ಬರುವಂತೆ, ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ನೀಡಲಾಗಿದೆ.

Ram Mandir New

ಈ ಹಿಂದೆ  ರಿಷಬ್ ಶೆಟ್ಟಿ ಅವರಿಗೂ ಆಹ್ವಾನ ನೀಡಲಾಗಿದೆ. ಅಲ್ಲದೇ, ಯಶ್ ಅವರಿಗೂ ಬರುವಂತೆ ಆಹ್ವಾನ ನೀಡಲಾಗಿದೆಯಂತೆ. ಕನ್ನಡ ಸಿನಿಮಾ ರಂಗದ ಬೆರಳೆಣಿಕೆಯ ಕಲಾವಿದರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ.

Ram Mandir 01

ಒಂದು ಕಡೆ ಉದ್ಘಾಟನೆಗೆ ಆಹ್ವಾನ ಸಿಗುತ್ತಿದ್ದರೆ ಮತ್ತೊಂದು ಕಡೆ ಸಿನಿಮಾ ಸೆಲೆಬ್ರಿಟಿಗಳು ಕೂಡ ದೇಣಿಗೆ ನೀಡುತ್ತಿದ್ದಾರೆ. ಹುಭಾಷಾ ನಟಿ ಪ್ರಣೀತಾ ಸುಭಾಷ್(Pranitha Subhash), ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. 1 ಲಕ್ಷ ದೇಣಿಗೆ ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ನಟಿ  ಪಾತ್ರರಾಗಿದ್ದಾರೆ.

pranitha subhash

ಅಯೋಧ್ಯೆಯ ಶ್ರೀ ರಾಮಮಂದಿರ (Ram Mandir) ನಿಧಿ ಸಮರ್ಪಣ ಅಭಿಯಾನಕ್ಕೆ ಬೆಂಬಲಿಸಿ 1 ಲಕ್ಷ ರೂ. ನಟಿ ನೀಡಿದ್ದಾರೆ. ಈ ಕುರಿತು ಪ್ರಣೀತಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

ಇದೊಂದು ಐತಿಹಾಸಿಕ ಚಳುವಳಿ ಎಂದು ಬರೆದು ನಟಿ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನೀವೆಲ್ಲರೂ ಕೈಜೋಡಿಸಿ ಇದರ ಭಾಗವಾಗಬೇಕೆಂದು ನಾನು ವಿನಂತಿಸುತ್ತೇನೆ ಎಂದು ಪ್ರಣೀತಾ ಮನವಿ ಮಾಡಿದ್ದಾರೆ.

Share This Article