ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಸಂಭಾವ್ಯ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಮಂಡ್ಯದಲ್ಲೇ ಮನೆ ಮಾಡಲು ಯೋಚಿಸಿರುವ ಅವರು, ಜಿಲ್ಲೆಯ ಮರೀಗೌಡ ಬಡಾವನೆಯಲ್ಲಿ ಬಂಗಲೆಯೊಂದನ್ನು ಬಾಡಿಗೆಗೆ ಪಡೆಯಲು ನಿರ್ಧರಿಸಿದ್ದಾರೆ.
ಮಂಡ್ಯ ಕ್ಷೇತ್ರದಿಂದ ನಿಖಿಲ್ ಅವರೇ ಜೆಡಿಎಸ್‍ನಿಂದ ಚುನಾವಣಾ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಆದರಿಂದ ಜಿಲ್ಲೆಯ ಪ್ರತಿಷ್ಠಿತ ಬಡಾವಣೆಗಳಾದ ಬಂದೀಗೌಡ ಬಡಾವಣೆ, ಚಾಮುಂಡೇಶ್ವರಿ ನಗರ, ಮರೀಗೌಡ ಬಡಾವಣೆ ಹಾಗೂ ಅಶೋಕ ನಗರದಲ್ಲಿ ನಿಖಿಲ್ ಮನೆ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಮರೀಗೌಡ ಬಡಾವಣೆಯಲ್ಲಿ ಪ್ರತಿಷ್ಠಿತ ಬಂಗಲೆಯೊಂದು ಬಾಡಿಗೆಗೆ ಪಡೆಯಲು ನಿಖಿಲ್ ನಿರ್ಧರಿಸಿದ್ದಾರೆ. ಮಂಡ್ಯ ನಗರಸಭೆ ಮಾಜಿ ಉಪಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಚಿಕ್ಕಣ್ಣ ಎಂಬುವವರಿಗೆ ಸೇರಿದ ಮನೆಯನ್ನು ಸದ್ಯಕ್ಕೆ ಬಾಡಿಗೆ ಪಡೆಯಲು ನಿಖಿಲ್ ಚಿಂತಿಸಿದ್ದಾರೆ. ಇದನ್ನೂ ಓದಿ:ಅಂಬಿ ಅದೃಷ್ಟದ ಮನೆಗೆ ಶೀಘ್ರವೇ ಸುಮಲತಾ ಶಿಫ್ಟ್!
Advertisement
Advertisement
ನಾಲ್ಕು ಬೆಡ್ ರೂಂ, ವಿಶಾಲವಾದ ದೇವರಮನೆ ಹಾಗೂ ವಾಸ್ತು ಪ್ರಕಾರ ಮನೆ ನಿರ್ಮಾಣವಾಗಿದ್ದು, ನಿಖಿಲ್ ರಾಜಕೀಯ ಚುಟುವಟಿಕೆಗೆ ಅನುಕೂಲವಾಗಲೆಂದು ಮನೆ ಬಾಡಿಗೆ ಪಡೆಯಲು ನಿರ್ಧರಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಸ್ವಂತ ಮನೆ ಕಟ್ಟಲು ಕೂಡ ನಿಖಿಲ್ ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರಕಿದೆ. ಇದನ್ನೂ ಓದಿ:ಮಂಡ್ಯದಿಂದ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್
Advertisement
Advertisement
ಐದು ಎಕರೆ ಜಮೀನು ಖರೀದಿಸಿ ಅಲ್ಲಿಯೂ ತೋಟ, ಮನೆ ನಿರ್ಮಿಸಲು ಈಗಾಗಲೇ ನಿಖಿಲ್ ಪ್ಲಾನ್ ಮಾಡಿದ್ದಾರೆ. ರಾಜಕೀಯ, ಸಿನಿಮಾ ಜೊತೆಗೆ ಕೃಷಿಯಲ್ಲೂ ತೊಡಗಿಸಿಕೊಳ್ಳಲು ನಿಖಿಲ್ ಚಿಂತನೆ ನಡೆಸಿದ್ದಾರೆ. ಮಂಡ್ಯದಲ್ಲಿ ಸ್ವಂತ ಜಮೀನು, ಮನೆ ಮಾಡದಿದ್ದರೆ ಚುನಾವಣೆ ನಂತರ ನಿಖಿಲ್ ಮಂಡ್ಯಕ್ಕೆ ಬರಲ್ಲ ಎಂಬ ತಪ್ಪು ಸಂದೇಶ ರವಾನೆಯಾಗುತ್ತದೆ. ಇದು ಮತಗಳಿಕೆ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ. ಹೀಗಾಗಿ ಸ್ವಂತ ಕೃಷಿ ಜಮೀನು, ಮನೆ ನಿರ್ಮಿಸಿ ಮಂಡ್ಯ ಜನರನ್ನು ಭಾವನಾತ್ಮಕವಾಗಿ ಸೆಳೆಯಲು ನಿಖಿಲ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ನಿಖಿಲ್‍ಗೆ ಎದುರಾಳಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾಗಿದ್ದು, ಈಗಾಗಲೇ ಸುಮಲತಾ ಅವರು ಕೂಡ ಮಂಡ್ಯದ ಮಂಜುನಾಥ ನಗರದಲ್ಲಿರುವ ಸೈಟ್‍ನಲ್ಲಿ ಸ್ವಂತ ಮನೆ ಕಟ್ಟುವುದಾಗಿ ತಿಳಿಸಿದ್ದಾರೆ. ಇದರಿಂದ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ದಿನದಿಂದ ದಿನಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರ ರಂಗೇರುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv