ವಾಷಿಂಗ್ಟನ್: ಅಮೆರಿಕದಲ್ಲಿ ನಡೆಯಲಿರುವ 2024ರ ಅಧ್ಯಕ್ಷೀಯ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಅನೇಕರು ಅಧ್ಯಕ್ಷೀಯ ಚುನಾವಣೆಯಲ್ಲಿ (Presidential Bid) ಸ್ಪರ್ಧಿಸುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ವಿಶೇಷವೆಂದರೆ ಈ ಬಾರಿ ರಿಪಬ್ಲಿಕನ್ ಪಕ್ಷದಿಂದಲೇ (Republican Presidential Nomination) ಭಾರತೀಯ ಮೂಲದ ಇಬ್ಬರು ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿದ್ದಾರೆ.
ಭಾರತೀಯ ಮೂಲದ ದಕ್ಷಿಣ ಕೆರೊಲಿನಾದ ಮಾಜಿ ಗವರ್ನರ್ ನಿಕ್ಕಿ ಹ್ಯಾಲೆ (Nikki Haley) ಅವರು ಈಗಾಗಲೇ 2024ರಲ್ಲಿ ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
Advertisement
Advertisement
ಈ ಹಿಂದೆ ಟ್ರಂಪ್ ನೇತೃತ್ವದ ಸಂಪುಟದಲ್ಲಿ ಅಧಿಕಾರಿಯಾಗಿದ್ದ ಅವರು, ತಾವು ಟ್ರಂಪ್ ಅವರ ವಿರುದ್ಧ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಯಾಗುವುದಿಲ್ಲ ಎಂದು ಹಿಂದೆ ಹೇಳಿದ್ದರು. ಆದರೆ, ಈಗ ಮನಸ್ಸು ಬದಲಾಯಿಸಿದ್ದಾರೆ. ದೇಶದ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಹೊಸ ಪೀಳಿಗೆಯ ನಾಯಕತ್ವ ಅಗತ್ಯವಿದೆ ಎಂದು ಹೇಳಿದ್ದಾರೆ.
Advertisement
ಚುನಾಯಿತರಾದರೆ, 51 ವರ್ಷದ ಹ್ಯಾಲಿ ಅವರು ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆ ಹಾಗೂ ಭಾರತೀಯ ಮೂಲದ ಮೊದಲ ಅಮೆರಿಕ ಅಧ್ಯಕ್ಷರಾಗುತ್ತಾರೆ. ಇದನ್ನೂ ಓದಿ: ಫಸ್ಟ್ ಟೈಂ ಭಾರತೀಯ ವ್ಯಕ್ತಿಗೆ ಪಟ್ಟ – ಫಿಭಾ ಏಷ್ಯಾ ವಿಭಾಗದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್ ಆಯ್ಕೆ
Advertisement
ವಿವೇಕ್ ರಾಮಸ್ವಾಮಿ: ಅಮೆರಿಕದ 2024ರ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದಿಂದ ಭಾರತ ಮೂಲದ ವಿವೇಕ್ ರಾಮಸ್ವಾಮಿ (Vivek Ramaswamy) ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಮಾಹಿತಿಯನ್ನು ನೀಡಲಿದ್ದಾರೆ.
ಭಾರತೀಯ ಮೂಲದ 37 ವರ್ಷದ ವಿವೇಕ್ ರಾಮಸ್ವಾಮಿ ಅವರು ಉದ್ಯಮಿ ಆಗಿದ್ದು, ಮ್ಯಾಗಜೀನ್‍ವೊಂದರ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಅವರು ಅಧ್ಯಕ್ಷೀಯ ಚುನಾವಣೆಯ ಕುರಿತು ಹೆಚ್ಚು ಗಮನ ಹರಿಸುತ್ತಿದ್ದಾರೆ. ಜೊತೆಗೆ ಸ್ಥಳೀಯ ಸಂಸ್ಕøತಿಯ ಮರುಸ್ಥಾಪನೆಗೆ ಹೆಚ್ಚಿನ ಒತ್ತು ನೀಡಲು ಅಭಿಯಾನವನ್ನು ನಡೆಸಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಭಾರತದಿಂದ ವಲಸೆ ಹೋಗಿದ್ದ ದಂಪತಿ ಪುತ್ರರಾದ ವಿವೇಕ್ ಸಿನ್ಸಿನಾಟಿಯಲ್ಲಿ ಜನಿಸಿದ್ದು, ಹಾರ್ವರ್ಡ್ ಹಾಗೂ ಯಾಲೆ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪೂರೈಸಿದ್ದಾರೆ. ಇದನ್ನೂ ಓದಿ: ಕ್ಯಾಥೋಲಿಕ್ ಚರ್ಚ್‌ಗಳ ಪಾದ್ರಿಗಳಿಂದ 5,000 ಬಾಲಕಿಯರ ಮೇಲೆ ಅತ್ಯಾಚಾರ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k