ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆ (WHO), ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ & ನ್ಯೂರೋ ಸೈನ್ಸಸ್ ( NIMHANS) ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ನಿಮ್ಹಾನ್ಸ್ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
Advertisement
ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು 2019 ರಲ್ಲಿ ಸ್ಥಾಪಿಸಿದೆ. ಈ ಪ್ರಶಸ್ತಿಯನ್ನು ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ಆರೋಗ್ಯ ಮತ್ತು ವಿಶ್ವಾದ್ಯಂತ ಯೋಗಕ್ಷೇಮದ ಸುಧಾರಣೆಗೆ ಗಮನಾರ್ಹ ಕೊಡುಗೆ ನೀಡಿದ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಗೆ ನೀಡಲಾಗುತ್ತದೆ. ಅಂತೆಯೇ ಈ ಪ್ರಶಸ್ತಿಗೆ ನಿಮ್ಹಾನ್ಸ್ ಆಸ್ಪತ್ರೆಗೆ ಒಲಿದು ಬಂದಿದೆ.
Advertisement
Advertisement
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಅವರು ಈ ಪ್ರಶಸ್ತಿಗೆ ಭಾಜನವಾದ ನಿಮ್ಹಾನ್ಸ್ ಅಭಿನಂದನೆಗಳನ್ನು ಸಲ್ಲಿಸಿದರು. ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಕೂಡ ನಿಮ್ಹಾನ್ಸ್ ಅನ್ನು ಅಭಿನಂದಿಸಿದರು. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಭಾರತದ ಪ್ರಯತ್ನಗಳು ಮತ್ತು ಪ್ರವರ್ತಕ ಕೆಲಸವನ್ನು ಗುರುತಿಸಿದ್ದಕ್ಕಾಗಿ ಅವರು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ
Advertisement
ಪ್ರಶಸ್ತಿಯ ಕುರಿತು ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಪ್ರತಿಕ್ರಿಯಿಸಿ, ನಮ್ಮ ಸಾಂಸ್ಥಿಕ ಪ್ರಯಾಣದ ಈ ಹಂತದಲ್ಲಿ ಆರೋಗ್ಯ ಪ್ರಚಾರಕ್ಕಾಗಿ ಪ್ರತಿಷ್ಠಿತ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಸ್ವೀಕರಿಸಲು ನಾವು ಹೆಮ್ಮೆಪಡುತ್ತೇವೆ ಎಂದು ಖುಷಿ ಹಂಚಿಕೊಂಡರು. ಅಲ್ಲದೇ ಇದು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ನಮ್ಮ ಧ್ಯೇಯವನ್ನು ಮುಂದುವರಿಸುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಹೇಳಿದರು.