Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಂಪಿ ಉತ್ಸವದಲ್ಲಿ ‘ಶೇಕ್ ಇಟ್ ಪುಷ್ಪವತಿ’ ಡಾನ್ಸ್ ಮಾಡಲಿದ್ದಾರೆ ನಿಮಿಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹಂಪಿ ಉತ್ಸವದಲ್ಲಿ ‘ಶೇಕ್ ಇಟ್ ಪುಷ್ಪವತಿ’ ಡಾನ್ಸ್ ಮಾಡಲಿದ್ದಾರೆ ನಿಮಿಕಾ

Cinema

ಹಂಪಿ ಉತ್ಸವದಲ್ಲಿ ‘ಶೇಕ್ ಇಟ್ ಪುಷ್ಪವತಿ’ ಡಾನ್ಸ್ ಮಾಡಲಿದ್ದಾರೆ ನಿಮಿಕಾ

Public TV
Last updated: February 3, 2024 12:28 pm
Public TV
Share
2 Min Read
Nimika Ratnakar 4
SHARE

ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸ್ಮರಿಸಿಕೊಳ್ಳುವ ಈ ವರ್ಷದ ಹಂಪಿ ಉತ್ಸವಕ್ಕೆ (Hampi Utsav) ರಾಜ್ಯ ಸರ್ಕಾರ ಮುಹೂರ್ತ ನಿಗಧಿ ಮಾಡಿದೆ. ಇದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ನಾನಾ ಪ್ರಕಾರಗಳ ಕಲಾ ಪ್ರದರ್ಶನ, ಥರ ಥರದ ಕಾರ್ಯಕ್ರಮಗಳು ಈ ಉತ್ಸವದ ಪ್ರಧಾನ ಆಕರ್ಷಣೆ. ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ. ಈ ಬಾರಿ ಅಂಥಾದ್ದೊಂದು ಸುವರ್ಣಾವಕಾಶ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ (Nimika Ratnakar) ಅವರಿಗೆ ಲಭಿಸಿದೆ.

Nimika Ratnakar 2

ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಶೇಕ್ ಇಟ್ ಪುಷ್ಪವತಿ (Shake It Pushpavati) ಎಂಬ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಪ್ರಸಿದ್ಧಿ ಪಡೆದುಕೊಂಡಿರುವವರು ನಿಮಿಕಾ ರತ್ನಾಕರ್. ವಿಶೇಷವೆಂದರೆ, ಈ ಹಾಡೇ ಅವರನ್ನು ಹಂಪಿ ಉತ್ಸವದಲ್ಲಿ ಭಾಗಿಯಾಗಿ ನೃತ್ಯ ಪ್ರದರ್ಶನ ನೀಡುವ ಅವಕಾಶ ಕಲ್ಪಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಗಳನ್ನು ಮಾಡಿಕೊಂಡಿರುವ ನಿಮಿಕಾ, ಆ ಕ್ಷಣಕ್ಕಾಗಿ ಕಾಯುತ್ತಿದ್ದಾರೆ.

Nimika Ratnakar

ಹಂಪಿ ಎಂದರೇನೇ ಅದೇನೋ ಆಕರ್ಷಣೆ. ನಿಮಿಕಾ ರತ್ನಾಕರ್ ಪಾಲಿಗೂ ಅಂಥಾದ್ದೊಂದು ಸೆಳೆತವಿದೆಯಂತೆ. ಆದರೆ ಈ ವರೆಗೂ ಅಲ್ಲಿಗೆ ಭೇಟಿ ಕೊಡುವ ಅವಕಾಶ ಕೂಡಿ ಬಂದಿರಲಿಲ್ಲ. ಕೆಲ ಹಾಡುಗಳ ಮೂಲಕವಷ್ಟೇ ಹಂಪಿಯನ್ನು ಕಣ್ತುಂಬಿಕೊಂಡಿದ್ದ ತಮ್ಮ ಪಾಲಿಗೆ ಆ ಪರಿಸರದಲ್ಲಿ ಬೆರೆಯುವ ಅವಕಾಶ ಸಿಕ್ಕಿದ್ಚದು ಖುಷಿ ಕೊಟ್ಟಿದೆ ಎಂಬುದು ನಿಮಿಕಾ ಮನದ ಮಾತು. ಈ ಹಿಂದೆ ನಿಮಿಕಾ ದಸರಾ ಉತ್ಸವದಲ್ಲಿಯೂ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಅವರ ಪೋಷಕರು ಹಾಜರಿದ್ದು ಖುಷಿಗೊಂಡಿದ್ದರು. ಈ ಬಾರಿಯೂ ಪೋಷಕರೊಂದಿಗೆ ಹಂಪಿ ಉತ್ಸವದಲ್ಲಿ ಭಾಗಿಯಾಗೋ ಇಂಗಿತ ನಿಮಿಕಾರದ್ದು.

Nimika Ratnakar 1

ಅಷ್ಟಕ್ಕೂ ಶೇಕ್ ಇಟ್ ಪುಷ್ಪವತಿ ಎಂಬ ಹಾಡು ನಿಮಿಕಾಗೆ ಒಂದಿಡೀ ಕರ್ನಾಟಕಕ್ಕೆ ಪ್ರದಕ್ಷಿಣೆ ಹಾಕುವ ಅವಕಾಶ ಕಲ್ಪಿಸುತ್ತಿದೆ. ಈಗಾಗಲೇ ಅವರು ರಾಜ್ಯದ ನಾನಾ ಪ್ರದೇಶಗಳಲ್ಲಿ ಈ ನೃತ್ಯ ಪ್ರದರ್ಶನ ನೀಡಿದ್ದಾರೆ. ಇದೀಗ ಹಂಪಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರೋದು ಅವರ ಪಾಲಿಗೆ ವಿಶೇಷ ಘಳಿಗೆ. ಯಾಕೆಂದರೆ, ಉತ್ತರ ಕರ್ನಾಟಕ ಮಂದಿಯ ಪ್ರೀತಿ, ಅಭಿಮಾನ ಪಡೆದುಕೊಂಡಿರುವ ಅವರಿಗೆ, ಅಭಿಮಾನಿಗಳ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಸುಯೋಗ ಕೂಡಿ ಬಂದಿದೆ.

TAGGED:dancehampi utsavNimika RatnakarShake It Pushpavatiಡಾನ್ಸ್ನಿಮಿಕಾ ರತ್ನಾಕರ್ಶೇಕ್ ಇಟ್ ಪುಷ್ಪವತಿಹಂಪಿ ಉತ್ಸವ
Share This Article
Facebook Whatsapp Whatsapp Telegram

Cinema news

honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories

You Might Also Like

basava kalyana police station protest
Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
By Public TV
8 seconds ago
Pakistan and Saudi Arabia agreement
Latest

ಇರಾನ್-ಇಸ್ರೇಲ್ ಯುದ್ಧಕ್ಕೆ ಪಾಕಿಸ್ತಾನ ಎಂಟ್ರಿ ಕೊಡುತ್ತಾ?

Public TV
By Public TV
33 minutes ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ದಾಳಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
52 minutes ago
kea
Bengaluru City

UGCET | ಶುಲ್ಕ ಪಾವತಿಗೆ ಮಾ.7 ಕೊನೆ ದಿನ: ಕೆಇಎ

Public TV
By Public TV
1 hour ago
Nitish Kumar Bihar
Latest

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ? – ನಿತೀಶ್ ಪುತ್ರ ನಿಶಾಂತ್‌ಗೆ ಡಿಸಿಎಂ ಹುದ್ದೆಗೆ ಡೀಲ್

Public TV
By Public TV
1 hour ago
Sriramulu 1
Bengaluru City

ಮೀಸಲಾತಿ ಸರಿಯಾಗಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟ – ಶ್ರೀರಾಮುಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?