‘ನಿಮ್ಮೆಲ್ಲರ ಆರ್ಶೀರ್ವಾದ’ಕ್ಕಾಗಿ ಹೊಸಬರ ಭಿನ್ನ ಪ್ರಯತ್ನ- ಚಿತ್ರದ ಪೋಸ್ಟರ್‌ ಔಟ್

Public TV
2 Min Read
nimmellara ashirvada

ಚಿತ್ರರಂಗವೇ ಹರಿಯುವ ನೀರಿನ ಹಾಗೇ. ಹೊಸಬರ ಎಂಟ್ರಿಯಾಗುತ್ತಲೇ ಇರುತ್ತದೆ. ಗೆದ್ದವರು ಚಿತ್ರರಂಗದಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳುತ್ತಾರೆ. ಇದೀಗ ನಿಮ್ಮೆಲ್ಲರ ಆರ್ಶೀರ್ವಾದಕ್ಕಾಗಿಯೇ ಹೊಸಬರ ತಂಡವೊಂದು ಭಿನ್ನವಾಗಿರೋ ಟೈಟಲ್ ಹೊತ್ತು ‘ನಿಮ್ಮೆಲ್ಲರ ಆರ್ಶೀರ್ವಾದ’ (Nimmelara Ashirvada) ಚಿತ್ರದ ಮೂಲಕ ಬರುತ್ತಿದ್ದಾರೆ. ಸದ್ಯ ಚಿತ್ರದ ಫಸ್ಟ್ ಲುಕ್ ಎಲ್ಲೆಡೆ ಸದ್ದು ಮಾಡ್ತಿದೆ.‌ ಇದನ್ನೂ ಓದಿ:‘ಕೃಷ್ಣಂ ಪ್ರಣಯ ಸಖಿ’ಯಾಗಿ ಲವರ್‌ ಬಾಯ್‌ ಲುಕ್‌ನಲ್ಲಿ ಗೋಲ್ಡನ್‌ ಸ್ಟಾರ್‌ ಎಂಟ್ರಿ

nimmelara ashirvada

ವರುಣ್ ಸಿನಿ ಕ್ರಿಯೇಷನ್ಸ್ ಚೊಚ್ಚಲ ಹೆಜ್ಜೆ ‘ನಿಮ್ಮೆಲ್ಲರ ಆರ್ಶೀರ್ವಾದ’ ಸಿನಿಮಾ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಮುಗಿಸಿ ಬಿಡುಗಡೆಗೆ ಹಂತಕ್ಕೆ ಬಂದಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ಈ ಚಿತ್ರಕ್ಕೆ ವರುಣ್ ಹೆಗ್ಡೆ ಹಣ ಹಾಕಿದ್ದು, ಇದು ಇವರ ಮೊದಲ ಪ್ರಯತ್ನವಾಗಿದೆ. ಚಿತ್ರರಂಗದ ಮೇಲಿನ ಅಪಾರ ಅಭಿಮಾನ ಹಾಗೂ ಆಸಕ್ತಿಯಿಂದಾಗಿ ವರುಣ್ ಹೆಗ್ಡೆ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಈ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದ್ದು, ನೋಡುಗರ ಗಮನ ಸೆಳೆಯುತ್ತಿದೆ.

nimmelara ashirvada 1

ಕೌಟುಂಬಿಕ ಕಥಾಹಂದರದ ‘ನಿಮ್ಮೆಲ್ಲರ ಆಶೀರ್ವಾದ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್ ಶೆಟ್ಟಿ (Pratheek Shetty) ನಾಯಕನಾಗಿ ಸ್ಯಾಂಡಲ್‌ವುಡ್‌ಗೆ (Sandalwood) ಪದಾರ್ಪಣೆ ಮಾಡಿದ್ದು, ಭಿನ್ನ ಸಿನಿಮಾ ಖ್ಯಾತಿಯ ಪಾಯಲ್ ರಾಧಾಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಎಂ. ಎನ್.ಲಕ್ಷ್ಮೀದೇವಿ, ಅರವಿಂದ ಬೋಳಾರ್, ಗೋವಿಂದೇಗೌಡ, ಸ್ವಾತಿ ಗುರುದತ್, ದಿನೇಶ್ ಮಂಗಳೂರು ಸೇರಿದಂತೆ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ.

ಯುವ ನಿರ್ದೇಶಕ ರವಿಕಿರಣ್ ಆಕ್ಷನ್ ಕಟ್ ಹೇಳಿದ್ದು, ಸರವಣನ್ ಜಿ.ಎನ್.ಛಾಯಾಗ್ರಹಣ, ರಘು ನಿಡುವಳ್ಳಿ ಡೈಲಾಗ್, ರೂಪೇಂದ್ರ ಆಚಾರ್ ಕಲಾ ನಿರ್ದೇಶನ, ಸುನಾದ್ ಗೌತಮ್ ಸಂಗೀತ ಮತ್ತು ವಿವೇಕ್ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್ ಆರುಮುಗಂ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ. ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ನಿಮ್ಮೆಲ್ಲರ ಆಶೀರ್ವಾದ ಚಿತ್ರ ಇದೇ ತಿಂಗಳು ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ. ಅದಕ್ಕೂ ಮುನ್ನ ಚಿತ್ರತಂಡ ಇದೇ ವಾರ ಆಡಿಯೋ ಬಿಡುಗಡೆಗೆ ತಯಾರಿ ನಡೆಸಿದೆ.

Share This Article