ತಿರುವನಂತಪುರಂ: ಆರ್‌ಎಸ್‌ಎಸ್ ಕಾರ್ಯಕರ್ತ ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಏ.16 ರಂದು ಆರ್‌ಎಸ್‌ಎಸ್ ಕಾರ್ಯಕರ್ತ ಎಸ್.ಕೆ.ಶ್ರೀನಿವಾಸನ್ ಎಂಬಾತನ ಹತ್ಯೆಯಾಗಿತ್ತು. ಶ್ರೀನಿವಾಸನ್ ಹತ್ಯೆಗೆ ಎಸ್‌ಡಿಪಿಐ, ಪಿಎಫ್‌ಐನವರೇ ಕಾರಣ. ಈತನನ್ನು ಕೊಲ್ಲುವುದಾಗಿ ಹಿಂದೆ ಬೆದರಿಕೆ ಹಾಕಿದ್ದರು ಎಂದು ಶ್ರೀನಿವಾಸನ್ ಸ್ನೇಹಿತರು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ: ಅಮೆರಿಕ
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು 9 ಮಂದಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಅಲಪ್ಪುಳದಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ 24 ಗಂಟೆಗಳ ಅವಧಿಯಲ್ಲಿ ಎಸ್‌ಡಿಪಿಐ ಹಾಗೂ ಬಿಜೆಪಿ ನಾಯಕರ ಹತ್ಯೆ ನಡೆದಿತ್ತು. ಇದಕ್ಕೆ ಪ್ರತೀಕಾರವಾಗಿ ಆರ್‌ಎಸ್‌ಎಸ್ ಮುಖಂಡನ ಹತ್ಯೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಬಾಬರಿ ಮಸೀದಿ ಕೆಡವಿದಾಗ ನೀವು ಓಡಿಹೋಗಿದ್ದಿರಿ: ಬಿಜೆಪಿಗೆ ಉದ್ಧವ್ ಠಾಕ್ರೆ ತರಾಟೆ