– ಗಡಿಯಂಚಿನ ಗ್ರಾಮದ ಮನೆ-ಮನೆ ಸರ್ವೇ
ಚಾಮರಾಜನಗರ: ಕೇರಳದಲ್ಲಿ (Kerala) ಇಬ್ಬರು ನಿಫಾ ವೈರಸ್‍ನಿಂದ (Nipah virus) ಮೃತಪಟ್ಟ ಹಿನ್ನೆಲೆಯಲ್ಲಿ ಕೇರಳ ಗಡಿ ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಆರೋಗ್ಯ ಇಲಾಖೆ (Health Department) ಅಲರ್ಟ್‍ಗೆ ಮುಂದಾಗಿದೆ.
ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಹಂದಿ ಸೇರಿದಂತೆ ಮಾಂಸಾಹಾರ ಪದಾರ್ಥ ಸಾಗಿಸುವ ವಾಹನಗಳ ಮೇಲೆ ನಿಗಾ ಇಡಲಾಗಿದ್ದು, ಗುರುವಾರದಿಂದ ಗುಂಡ್ಲುಪೇಟೆ ಕಾಡಂಚಿನ ಗ್ರಾಮಗಳಲ್ಲಿ ಮನೆ-ಮನೆ ಸರ್ವೇ ನಡೆಸಿ ರೋಗ ಲಕ್ಷಣಗಳು ಕಂಡು ಬಂದವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಚೈತ್ರಾ ಕುಂದಾಪುರ 10 ದಿನ ಪೊಲೀಸ್ ಕಸ್ಟಡಿಗೆ
ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 5 ಹಾಸಿಗೆಗಳ ವಿಶೇಷ ವಾರ್ಡ್ ನಿರ್ಮಾಣ ಮಾಡಲು ಮುಂದಾಗಿದೆ. ಒಟ್ಟಿನಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ ಎಂದು ಚಾಮರಾಜನಗರ ಡಿಎಚ್‍ಓ ವಿಶ್ವೇಶ್ವರಯ್ಯ ಪಬ್ಲಿಕ್ ಟಿವಿಗೆ ಮಾಹಿತಿ ಕೊಟ್ಟಿದ್ದಾರೆ.
Web Stories