ತಿರುವನಂತಪುರ: ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕ ಭಾನುವಾರ ಬೆಳಗ್ಗೆ ನಿಫಾ ವೈರಸ್‍ನಿಂದಾಗಿ ಸಾವನ್ನಪ್ಪಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದ್ದ ಕೆಲವು ಮಾದರಿಗಳಿಂದ ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಟ್ಟಿದೆ. ಶನಿವಾರ ರಾತ್ರಿ ಬಾಲಕನ ಸ್ಥಿತಿ ಗಂಭೀರವಾಗಿದ್ದು, ದುರದೃಷ್ಟವಶತ್ ಬಾಲಕ ಇಂದು ಮುಂಜಾನೆ 5 ಗಂಟೆಗೆ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ ವೈರಸ್
Advertisement
Advertisement
ಇದೀಗ ಬಾಲಕನ ಜೊತೆ ಸಂಪರ್ಕ ಹೊಂದಿದ್ದವರನ್ನು ಪತ್ತೆ ಹಚ್ಚಲು ಸರ್ಕಾರ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಬಾಲಕನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರ ಕ್ವಾರಂಟೈನ್‍ಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಕೋಜಿಕೋಡ್ ಆಸ್ಪತ್ರೆಯಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾದ ಬಳಿಕ ಕೇಂದ್ರ ಸರ್ಕಾರ ತಾಂತ್ರಿಕ ಬೆಂಬಲ ನೀಡಲು ರಾಷ್ಟ್ರೀಯ ರೋಗ ನಿಯಂತ್ರಣ ತಂಡವನ್ನು ಕೇರಳಕ್ಕೆ ಕಳುಹಿಸಿಕೊಟ್ಟಿದೆ ಎಂದಿದ್ದಾರೆ. ಇದನ್ನೂ ಓದಿ: ಕೇರಳ ನರ್ಸ್ ಲಿನಿಗೆ ಫ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿ
Advertisement
Advertisement