ಶಿವಮೊಗ್ಗ: ಕೇರಳದಲ್ಲಿ ಹಲವರನ್ನು ಬಲಿ ಪಡೆದಿದ್ದ ನಿಪಾ ಸೋಂಕು ಸದ್ಯ ಕರಾವಳಿಯಿಂದ ಮಲೆನಾಡಿಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ನಿಪಾ ಸೋಕು ಶಂಕಿತ ವ್ಯಕ್ತಿಗೆ ಜಿಲ್ಲೆಯ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯುವಕ ಮಿಥುನ್ ಗೆ ಸೋಂಕು ಹರಡಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಮೂಲತಃ ಸಾಗರದ ಮಿಥುನ್ ಕೇರಳದ ಕಾಸರಗೋಡಿನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕೇರಳದಲ್ಲಿ ನಿಪಾ ಸೋಂಕು ಹರಡಿದ ಹಿನ್ನೆಲೆಯಲ್ಲಿ ಸಾಗರಕ್ಕೆ ಮರಳಿದ್ದರು. ಈ ವೇಳೆ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನು ಓದಿ: ಅಸೌಖ್ಯದಲ್ಲಿದ್ರೂ ನೋವನ್ನು ಲೆಕ್ಕಿಸದೇ ಕೆಲಸ ಮಾಡ್ತಿದ್ಳು: ನಿಪಾ ವೈರಸ್‍ಗೆ ಬಲಿಯಾದ ನರ್ಸ್ ಪತಿ ಕಣ್ಣೀರು
Advertisement
Advertisement
ಮೊದಲು ಮಿಥುನ್ ಸಾಗರ ತಾಲೂಕಿನ ಶಿರವಂತೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದರು. ಈಗ ಸಾಗರ ಸರ್ಕಾರಿ ಆಸ್ಪತ್ರೆಯ ವಿಶೇಷ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಿಥುನ್ ರಕ್ತ ಮಾದರಿ ಸಂಗ್ರಹಿಸಿ ಪುಣೆ ಆಸ್ಪತ್ರೆಗೆ ಕಳಿಸಲಾಗಿದೆ. ಇದನ್ನು ಓದಿ: ಮಂಗಳೂರಲ್ಲಿ ನಿಪಾ ಸೋಂಕು ಶಂಕೆ – ಹೈ ಅಲರ್ಟ್ ಜಾರಿ
Advertisement
ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಶಿವಮೊಗ್ಗ ಡಿಎಚ್‍ಓ ಡಾ ವೆಂಕಟೇಶ್, ಮಿಥುನ್ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಚೇತರಿಕೆ ಕಾಣಿಸುತ್ತಿದೆ. ರಕ್ತದ ಪರೀಕ್ಷೆ ವರದಿ ಬಂದ ಬಳಿಕ ಈ ಕುರಿತು ಖಚಿತ ಮಾಡಲಾಗುತ್ತದೆ. ನಿಪಾ ಕುರಿತ ಜಾಗೃತಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಬಾವಲಿ ಜ್ವರಕ್ಕೆ ಕರ್ನಾಟಕದಲ್ಲೂ ಹೈಅಲರ್ಟ್ – ಈ ಮಾಹಿತಿ ನಿಮಗೆ ಗೊತ್ತಿರಲಿ..!