ಮಡಿಕೇರಿ: ಕೇರಳದಲ್ಲಿ ಹಲವರನ್ನು ಬಲಿ ತೆಗೆದುಕೊಂಡಿರುವ ನಿಪಾ ವೈರಸ್ ರಾಜ್ಯಕ್ಕೂ ಆಗಮಿಸುವ ಶಂಕೆ ವ್ಯಕ್ತವಾಗಿದ್ದು, ಮಂಗಳೂರಿನ ಇಬ್ಬರಲ್ಲಿ ನಿಪಾ ವೈರಸ್ ಲಕ್ಷಣ ಕಂಡು ಬಂದಿದೆ.
ಕೇರಳ ಮತ್ತು ಮಂಗಳೂರು ಮೂಲದ ಇಬ್ಬರಲ್ಲಿ ನಿಪಾ ವೈರಸ್ ಲಕ್ಷಣ ಕಾಣಿಸಿದ್ದು, ಇಬ್ಬರ ರಕ್ತವನ್ನು ಮಣಿಪಾಲದ ಕೆಎಂಸಿ ಸೆಂಟರ್‍ಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಶಂಕಿತರಿಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ತೀವ್ರ ಎಚ್ಚರಿಕೆಯನ್ನು ವಹಿಸಲಾಗಿದೆ.
Advertisement
ಈಗಾಗಲೇ ಸೋಂಕು ವ್ಯಾಪಿಸದಂತೆ ಎಚ್ಚರಿಕೆ ಕ್ರಮವಹಿಸಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಿಂದ ವರದಿ ತರಿಸಿಕೊಂಡಿರುವ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಸೂಚನೆ ನೀಡಿದೆ. ಇದನ್ನು ಓದಿ: ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಪಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ
Advertisement
Advertisement
ಈ ನಡುವೆ ಮಂಗಳೂರಿನ ಆಸ್ಪತ್ರೆಗಳಿಗೆ ಕೇರಳ ಮೂಲದ ರೋಗಿಗಳೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಸೋಂಕು ಹರಡುವ ಆತಂಕ ಎದುರಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ರೋಗದ ಲಕ್ಷಣ ಕಂಡು ಬಂದರೆ ತಕ್ಷಣ ಕ್ರಮಕ್ಕಾಗಿ ವಾಟ್ಸಪ್ ಗ್ರೂಪ್ ಗಳನ್ನು ತೆರೆದಿದ್ದು, ಮುನ್ನಚ್ಚೆರಿಕಾ ಕ್ರಮವಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವಾರ್ಡ್ ತೆರೆಯಲಾಗಿದೆ.ಇದನ್ನು ಓದಿ: ಬಾವಲಿ ಜ್ವರಕ್ಕೆ ಕರ್ನಾಟಕದಲ್ಲೂ ಹೈಅಲರ್ಟ್ – ಈ ಮಾಹಿತಿ ನಿಮಗೆ ಗೊತ್ತಿರಲಿ..!
Advertisement
ಇನ್ನು ಕೇರಳದಲ್ಲಿ ಸಾವಿನ ಸಂಖ್ಯೆ ಏರಿಕೆ ಆಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊಯಿಕ್ಕೋಡ್ ವೈದ್ಯಕೀಯ ಕಾಲೇಜಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕೇರಳದಲ್ಲಿ ಹೆಚ್ಚಾಗಿ ವೈರಾಣು ವ್ಯಾಪಿಸಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. 50ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಅಂತ ಕೇರಳ ಆರೋಗ್ಯ ಸಚಿವಾಲಯ ತಿಳಿಸಿದೆ.