ನವದೆಹಲಿ: ಪಿಎನ್‍ಬಿ ಬ್ಯಾಂಕ್ ಹಗರಣದ ಆರೋಪಿ ನೀರವ್ ಮೋದಿ ಸೋದರಿ ಪೂರ್ವಿ ಸ್ವಿಸ್ ಬ್ಯಾಂಕ್ ನಲ್ಲಿ ಹೊಂದಿರುವ ನಾಲ್ಕು ಖಾತೆಯನ್ನು ಜಪ್ತಿ ಮಾಡಲಾಗಿದೆ.
ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‍ಎ) ಕಾಯ್ದೆಯ ಅಡಿ ಪ್ರಕರಣ ದಾಖಲಿಸಿದ್ದ ಜಾರಿ ನಿರ್ದೇಶನಾಲಯ ಸ್ವಿಜರ್ಲೆಂಡ್ ಸರ್ಕಾರಕ್ಕೆ ಪೂರ್ವಿ ಖಾತೆಯ ವ್ಯವಹಾರಗಳ ಮೇಲೆ ನಿರ್ಬಂಧ ಹೇರಬೇಕೆಂದು ಮನವಿ ಮಾಡಿಕೊಂಡಿತ್ತು. ಭಾರತದ ಮನವಿಯನ್ನು ಸ್ವೀಕರಿಸಿದ್ದ ಸ್ವಿಜರ್ಲೆಂಡ್ ಸರ್ಕಾರ ಪೂರ್ವಿ ಖಾತೆಯನ್ನು ವಶಕ್ಕೆ ಪಡೆದಿದೆ ಎಂದು ಜಾರಿ ನಿರ್ದೇಶನಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
Advertisement
Advertisement
ಒಟ್ಟು 6 ದಶಲಕ್ಷ ಅಮೆರಿಕನ್ ಡಾಲರ್(ಅಂದಾಜು 41.46 ಕೋಟಿ ರೂ.) ಹಣ ಇದ್ದ ಈ ನಾಲ್ಕು ಖಾತೆಗನ್ನು ಈಗ ಜಪ್ತಿ ಮಾಡಲಾಗಿದೆ. ನೀರವ್ ಮೋದಿ ತನ್ನ ಹಣವನ್ನು ಸೋದರಿಯ ಖಾತೆಯಲ್ಲಿ ಇರಿಸಿದ್ದ ಎಂಬ ಮಾಹಿತಿ ಮೇರೆಗೆ ಅಕೌಂಟ್ ಜಪ್ತಿ ಮಾಡಲಾಗಿದೆ.
Advertisement
ಪಿಎನ್‍ಬಿ ಹಗರಣದ ಆರೋಪಿ ನೀರವ್ ಮೋದಿಯನ್ನು ಸದ್ಯ ಲಂಡನ್ ನಗರದ ವಾಂಡಸ್ವರ್ಥ್ ಜೈಲಿನಲ್ಲಿರಿಸಲಾಗಿದೆ. ನೀರವ್ ಮೋದಿ ಲಂಡನ್ ನಲ್ಲಿರುವ ಬಗ್ಗೆ ಟೆಲಿಗ್ರಾಫ್ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಲಂಡನ್ ಪೊಲೀಸರು ನೀರವ್ ಮೋದಿಯನ್ನು ಮಾರ್ಚ್ 19ರಂದು ಹೋಲ್ಬಾರ್ನ್ ಮೆಟ್ರೋ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇದೂವರೆಗೂ ನೀರವ್ ಮೋದಿ ಜಾಮೀನಿಗಾಗಿ ನಾಲ್ಕು ಬಾರಿ ಅರ್ಜಿ ಸಲ್ಲಿಸಿದ್ದರೂ, ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
Advertisement
ಮಾರ್ಚ್ 9ರಂದು ವರದಿ:
48 ವರ್ಷದ ನೀರವ್ ಮೋದಿ ಲಂಡನ್ ನಲ್ಲಿ ರಾಜರೋಷವಾಗಿ ಓಡಾಡುತ್ತಿರವ ಬಗ್ಗೆ ಟೆಲಿಗ್ರಾಫ್ ಮಾರ್ಚ್ 9 ರಂದು ವರದಿ ಮಾಡಿತ್ತು. ಪತ್ರಕರ್ತರು ಕೇಳಿದ ಎಲ್ಲ ಪ್ರಶ್ನೆಗಳಿಗೆ “ನೋ ಕಮೆಂಟ್ಸ್” ಎಂದು ಉತ್ತರಿಸಿದ್ದರು. 13 ಸಾವಿರ ಕೋಟಿ ರೂ. ವಂಚನೆಗೈದ ಆರೋಪಿ ನೀರವ್ ಮೋದಿಗೆ ಇನ್ನು ಎಷ್ಟು ದಿನ ಲಂಡನ್ ನಲ್ಲಿ ಇರಲಿದ್ದೀರಿ ಎನ್ನುವ ಪ್ರಶ್ನೆಗೆ ಅವರಿಂದ ಯಾವುದೇ ಉತ್ತರ ಸಿಕ್ಕಿರಲಿಲ್ಲ. 48 ವರ್ಷದ ನೀರವ್ ಮೋದಿ ಲಂಡನ್ ನಗರದಲ್ಲಿ ಹೋದ ಎಲ್ಲ ಕಡೆ ಪತ್ರಕರ್ತರು ಅವರನ್ನು ಹಿಂಬಾಲಿಸಿದ್ದರು. ಆದರೆ ಯಾವುದೇ ಪ್ರಶ್ನೆಗೆ ಉತ್ತರಿಸಲಿಲ್ಲ. ಕೊನೆಗೆ ನೀರವ್ ಮೋದಿ ಟ್ಯಾಕ್ಸಿ ಮಾಡಿ ಹೊರಟು ಹೋಗಿರುವ ದೃಶ್ಯ ಸೆರೆಯಾಗಿತ್ತು.
ಏನಿದು ಪ್ರಕರಣ?:
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಆರೋಪ ನೀರವ್ ಮೋದಿ ಮೇಲಿದೆ. ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಪ್ರಕರಣ ಸಂಬಂಧ ಈಗಾಗಲೇ ಮುಂಬೈ ಸೇರಿದಂತೆ ವಿದೇಶದಲ್ಲಿರುವ ನೀರವ್ ಮೋದಿ ಆಸ್ತಿಯನ್ನು ಜಾರಿ ನಿರ್ದೇಶನಾಲಯಕ್ಕೆ ಮುಟ್ಟುಗೋಲು ಹಾಕಿದೆ.