ನವದೆಹಲಿ: 8 ವರ್ಷದ ಹಿಂದೆ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದ ನಿರ್ಭಯ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ತಕ್ಷಣಕ್ಕೆ ಗಲ್ಲು ಶಿಕ್ಷೆ ಆಗೋ ಸಾಧ್ಯತೆ ತೀರಾ ಕಡಿಮೆ. ನಿರ್ಭಯ ತೀರ್ಪು ಪ್ರಶ್ನಿಸಿ ದೋಷಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೊಬ್ಡೆ, ವಿಚಾರಣೆಯ ಪೀಠದಿಂದ ದಿಢೀರ್ ಹಿಂದೆ ಸರಿದಿದ್ದೇ ಇದಕ್ಕೆ ಕಾರಣ. ವೈಯಕ್ತಿಕ ಕಾರಣಗಳಿಂದಾಗಿ ಈ ಅರ್ಜಿಯ ವಿಚಾರಣೆಯಿಂದ ತಾವು ಹಿಂದೆ ಸರಿಯುತ್ತಿದ್ದು, ಬುಧವಾರ ಬೆಳಗ್ಗೆ 10.30ಕ್ಕೆ ಹೊಸ ಪೀಠ ವಿಚಾರಣೆ ನಡೆಸಲಿದೆ ಎಂದು ಬೊಬ್ಡೆ ತಿಳಿಸಿದರು.
Advertisement
Advertisement
ಈ ಹಿಂದೆ ಜಸ್ಟೀಸ್ ಬೊಬ್ಡೆ ಅವರ ಅಣ್ಣನ ಮಗ ಅರ್ಜುನ್ ಬೊಬ್ಡೆ ನಿರ್ಭಯ ತಾಯಿ ಪರವಾಗಿ ವಾದ ಮಂಡನೆ ಮಾಡಿದರು. ಹೀಗಾಗಿ ವಿಚಾರಣೆ ಪಾರದರ್ಶಕವಾಗಿ ನಡೆಯಲಿ ಎನ್ನುವ ಉದ್ದೇಶದಿಂದ ಸಿಜೆ ಬೊಬ್ಡೆ ಈ ನಿರ್ಧಾರಕ್ಕೆ ಬಂದಿದ್ದಾರೆ. ವಿಚಾರಣೆ ಹಿನ್ನೆಲೆಯಲ್ಲಿ ಕೋರ್ಟ್‍ಗೆ ಬಂದಿದ್ದ ನಿರ್ಭಯ ತಾಯಿ ನಿರಾಸೆಯಿಂದ ಹಿಂತಿರುಗಿದ್ರು. ಮಂಗಳವಾರ ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ.