ಬೆಂಗಳೂರು: ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ (Nirmala Sitharaman) ಚೊಂಬು ಕೊಟ್ಟಿದ್ದಾರೆ, ಪಂಗನಾಮ ಹಾಕಿದ್ದಾರೆ. ರಾಜ್ಯಕ್ಕೆ ಏನೂ ಕೊಟ್ಟಿಲ್ಲ ಅಂತ ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.
Advertisement
ವಿಧಾನಸೌಧದಲ್ಲಿ (Vidhana Soudha) ಕರೆದಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಮಾತ್ರ ವಿಶೇಷ ಅನುದಾನ ಕೊಟ್ಟಿದ್ದಾರೆ. ಅವರ ಪ್ರಧಾನಮಂತ್ರಿ ಸ್ಥಾನ ಉಳಿಯಬೇಕು ಅಂದ್ರೆ ಆ ಎರಡು ರಾಜ್ಯಗಳು ಬೇಕು. ಅದಕ್ಕೆ ಅವರಿಗೆ ಕೊಟ್ಟಿದ್ದಾರೆ ಅಂತ ವ್ಯಂಗ್ಯವಾಡಿದ್ದಾರೆ. ನಿರ್ಮಲಾ ಸೀತಾರಾಮನ್ 48.21 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದಾರೆ. ಅದರಲ್ಲಿ 14.01 ಲಕ್ಷ ಕೋಟಿ ರೂ. ಅಷ್ಟು ಸಾಲ ತೆಗೆದುಕೊಳ್ತಿದ್ದಾರೆ. ಕರ್ನಾಟಕಕ್ಕೆ ನಿರಾಸೆಯಾಗಿದೆ. ರಾಜ್ಯದ ಜನರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
Advertisement
Advertisement
ಬೆಂಗಳೂರು (Bengaluru) ಪೆರಿಫೆರಲ್ ರಿಂಗ್ ರೋಡ್‌ಗೆ, ಜಲಮೂಲ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಅವರೇ ಘೋಷಣೆ ಮಾಡಿದ್ದ ಹಣ ಕೊಟ್ಟಿಲ್ಲ. ಒಟ್ಟಾರೆಯಾಗಿ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಚೊಂಬು ಕೊಟ್ಟಿದ್ದಾರೆ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: Union Budget 2024: ಸರ್ಕಾರಕ್ಕೆ 1 ರೂಪಾಯಿ ಬಂದಿದ್ದು ಎಲ್ಲಿಂದ, ಹೋಗಿದ್ದು ಎಲ್ಲಿಗೆ?
Advertisement
ರೈತರಿಗೂ ಅನ್ಯಾಯ:
ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಮಾಡಬೇಕು ಅಂತ ರೈತರು ಬೇಡಿಕೆ ಇಟ್ಟಿದ್ದರು. ಅದರ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಬಗ್ಗೆ ಬಹಳ ಮಾತಾಡ್ತಾರೆ ಇವರು. ಆದ್ರೆ ಸಮಾಜ ಕಲ್ಯಾಣ ಇಲಾಖೆಗೆ ಅನುದಾನ ಕಡಿಮೆ ಮಾಡಿದ್ದಾರೆ. ಮಧ್ಯಂತರ ಬಜೆಟ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 9,409 ಕೋಟಿ ಕೊಟ್ಟಿದ್ರೆ, ಈಗ 6,770 ಕೋಟಿ ಮಾತ್ರ ಕೊಟ್ಟಿದ್ದಾರೆ. ಕರ್ನಾಟಕದ ಐವರು ಮಂತ್ರಿಗಳಿದ್ದರೂ ಏನೂ ಮಾಡಿಲ್ಲ, ಏನೂ ಕೊಟ್ಟಿಲ್ಲ. ಒಟ್ಟಾರೆಯಾಗಿ ರೈತರಿಗೆ ಪಂಗನಾಮ ಹಾಕಿದೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Union Budget 2024: ಬಿಹಾರ, ಆಂಧ್ರಪ್ರದೇಶಕ್ಕೆ ಬಜೆಟ್‌ನಲ್ಲಿ ಭರ್ಜರಿ ಅನುದಾನ
ರಾಯಚೂರು ಏಮ್ಸ್ ಬೇಡಿಕೆ ಬಹಳ ವರ್ಷಗಳಿಂದ ಇದೆ, ಅದನ್ನೂ ಕೂಡ ಕೊಡಲಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ಬಜೆಟ್‌ಜನ ವಿರೋಧಿ, ನಿರಾಶಾದಾಯಕ ಬಜೆಟ್. ಬಡವರು, ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅನ್ಯಾಯ ಆಗಿದೆ ಅಂತಾ ಟೀಕಿಸಿದ್ರು. ಇದನ್ನೂ ಓದಿ: ಕಾಂಗ್ರೆಸ್ ಪ್ರಣಾಳಿಕೆ, ಹಿಂದಿನ ಬಜೆಟ್‌ಗಳ ಕಾಪಿ ಪೇಸ್ಟ್: ಬಜೆಟ್ ಬಗ್ಗೆ ರಾಹುಲ್ ಗಾಂಧಿ ಲೇವಡಿ
ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಭದ್ರಾ ಮೇಲ್ದಂಡೆ ಯೋಜನಗೆ ಯಾವ ಟೆಕ್ನಿಕಲ್ ಪ್ರಾಬ್ಲಂ ಇಲ್ಲ. ಅವರೇ ಅನುದಾನ ಘೋಷಣೆ ಮಾಡಿದ್ದು. ಟೆಕ್ನಿಕಲ್ ಪ್ರಾಬ್ಲಂ ಇದ್ರೆ ಏಕೆ ಘೋಷಣೆ ಮಾಡಿದ್ರು? ಅಂತ ಟಾಂಗ್ ಕೊಟ್ರು. ಕೇಂದ್ರ ಸರ್ಕಾರ ದ್ವೇಷ ಬಿಟ್ಟು ಬೇರೆ ಏನು ಮಾಡ್ತಾರೆ? ದಕ್ಷಿಣ ಭಾರತದಲ್ಲಿ ಬೆಂಬಲ ಸಿಕ್ಕಿಲ್ಲ. ಹಾಗಾಗಿ ಆಂಧ್ರಪ್ರದೇಶ ಬಿಟ್ಟು ಬೇರೆಯವರಿಗೆ ಏನೂ ಸಿಕ್ಕಿಲ್ಲ ಅಂತಾ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Budget 2024 | ದಿಢೀರ್ ಕುಸಿತಗೊಂಡು ನಂತರ ಸಾವಿರ ಅಂಕ ಏರಿಕೆಯಾಗಿ ಸೆನ್ಸೆಕ್ಸ್ ಮತ್ತೆ ಕುಸಿದಿದ್ದು ಯಾಕೆ?