ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) AI ಲ್ಯಾಬ್ ಉದ್ಘಾಟನೆ ಮಾಡಿದ್ದಾರೆ.
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ AI ಲ್ಯಾಬ್‌ಗೆ ಇಂದು ಚಾಲನೆ ನೀಡಿದರು. ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನೂತನವಾಗಿ AI ಲ್ಯಾಬ್ ನಿರ್ಮಾಣ ಮಾಡಲಾಗಿದ್ದು, ಎರಡು ಲ್ಯಾಬ್‌ಗಳನ್ನ ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 400 ಬಸ್ಸು ಸೇರ್ಪಡೆ
ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ AI ಲ್ಯಾಬ್ ಇದಾಗಿದ್ದು, ಉದ್ಘಾಟನೆ ಬಳಿಕ ಎಐ ಕುರಿತು ವಿದ್ಯಾರ್ಥಿಗಳಿಗೆ ನಿರ್ಮಲಾ ಸೀತಾರಾಮನ್ ವಿವರಿಸಿದರು. ಇದೇ ವೇಳೆ ವಿದ್ಯಾರ್ಥಿನಿಯ ವಿವರಣೆಗೆ ಸಚಿವೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಸಚಿವೆ ಸೀತಾರಾಮನ್ ಅವರಿಗೆ ಕಾಂಗ್ರೆಸ್ ಶಾಸಕ HR ಗವಿಯಪ್ಪ, ಡಿಸಿ ಕವಿತಾ ಮನ್ನಿಕೇರಿ, ಎಸ್ಪಿ ಎಸ್ ಜಾಹ್ನವಿ ಸಾಥ್ ನೀಡಿದರು. ಇದನ್ನೂ ಓದಿ: ಬುದ್ದಿಮಾಂದ್ಯ ಮಕ್ಕಳ ಶಾಲೆಯಲ್ಲಿ ದೌರ್ಜನ್ಯ – ಶಿಕ್ಷಕರ ವಿರುದ್ಧ ಕ್ರಮಕ್ಕೆ ಹೆಬ್ಬಾಳ್ಕರ್ ಸೂಚನೆ

