ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ರಾಯಚೂರು (Raichuru) ಭಾರತ ವನ ಯೋಜನೆ ಕಾರ್ಯಕ್ರಮದಲ್ಲಿ ಕೇಂದ್ರ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ (Niramala Sitharaman) ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಯಚೂರಿನ ಯಕ್ಲಾಸಪುರ ಘನತಾಜ್ಯ ಘಟಕದಲ್ಲಿ ಭಾರತ ವನ ಯೋಜನೆ ಅಡಿ ಮಿಯಾವಾಕಿ ಪದ್ದತಿ ಮೂಲಕ ಅರಣ್ಯೀಕರಣವನ್ನ ವರ್ಚುವಲ್ ಆಗಿ ಉದ್ಘಾಟನೆ ಮಾಡಿದರು. ಸಸಿ ನೆಡುವ ವೇಳೆ ವಿದ್ಯಾರ್ಥಿಗಳ ಜೊತೆ ಪರಿಸರ ಬಗ್ಗೆ ಸಂವಾದ ನಡೆಸಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ʻತಾಯಿಯ ಹೆಸರಿನಲ್ಲಿ ಒಂದು ಮರʼ ಅಭಿಯಾನಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: ಮಂತ್ರಾಲಯ ರಾಯರ ಹುಂಡಿಗೆ 22 ದಿನದಲ್ಲಿ 4.35 ಕೋಟಿ ಕಾಣಿಕೆ
ಇದಕ್ಕೂ ಮುನ್ನ ಶಕ್ತಿನಗರದ ಆರ್‌ಟಿಪಿಎಸ್ ಗೆಸ್ಟ್ ಹೌಸ್‌ನಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆ ರಾಯಚೂರು, ಯಾದಗಿರಿ ಅಭಿವೃದ್ಧಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಕೆಕೆಆರ್‌ಡಿಬಿ ಕಾರ್ಯದರ್ಶಿ ನಳೀನ್ ಅತುಲ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಹಣಕಾಸು ಒಳಗೊಳ್ಳುವಿಕೆ ಮತ್ತು ಜೀವನೋಪಾಯ ಕ್ಷೇತ್ರಗಳ ಪ್ರಮುಖ ಅಭಿವೃದ್ಧಿಯ ಕುರಿತು ಪರಿಶೀಲನೆ ಮಾಡಿದರು.













