ನವದೆಹಲಿ: ಎರಡು ಬಾರಿ ಕೇಂದ್ರ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು, ಮೂರನೇ ಅವಧಿಯಲ್ಲೂ ಪ್ರಧಾನಿ ನರೇಂದ್ರ ಮೋದಿಯವರ (Narendra Mod) ಸಂಪುಟದಲ್ಲಿ ಮುಂದುವರೆದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಮೋದಿ ಸಂಪುಟಕ್ಕೆ ಮೂರನೇ ಬಾರಿಗೆ ಆಯ್ಕೆಯಾದ ಏಕೈಕ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪಿಎಂ ಮೋದಿಯವರ ಕಳೆದ ಅವಧಿಯಲ್ಲಿ, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು. ಈ ವೇಳೆ ಆರ್ಥಿಕ ಸುಧಾರಣೆಗಳನ್ನು ಕೈಗೊಂಡು ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು 2014 ರಲ್ಲಿ ಪ್ರಧಾನಿ ಮೋದಿಯವರ ಸಂಪುಟದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಸಚಿವರಾಗಿ ಸೇರ್ಪಡೆಗೊಂಡರು ಮತ್ತು 2017 ರಲ್ಲಿ ರಕ್ಷಣಾ ಖಾತೆಯನ್ನು ಅವರು ನಿಭಾಯಿಸಿದ್ದರು.
2019ರ ಸಾರ್ವತ್ರಿಕ ಚುನಾವಣೆಯ ನಂತರ ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯಕ್ಕೆ ಒಳಗಾದಾಗ, ಸೀತಾರಾಮನ್ ಅವರು ಪೂರ್ಣ ಅವಧಿಗೆ ಹಣಕಾಸು ಖಾತೆಯ ಜವಾಬ್ದಾರಿಯನ್ನು ಪಡೆದುಕೊಂಡಿದ್ದರು.