– ಚಿಕ್ಕಬಳ್ಳಾಪುರದಲ್ಲಿ ಕೋಲ್ಡ್ ಸ್ಡೋರೇಜ್; ಹಣ ಇದೆ, ರಾಜ್ಯ ಸರ್ಕಾರ ಬೇಡಿಕೆ ಇಟ್ಟಿಲ್ಲ
ಚಿಕ್ಕಬಳ್ಳಾಪುರ: ಬೇಕಾಬಿಟ್ಟಿ ಗ್ಯಾರಂಟಿಗಳನ್ನ (Guarantee Schemes) ಕೊಡುವುದರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ದೇವನಹಳ್ಳಿಗೆ ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳು ಗ್ಯಾರಂಟಿ ಯೋಜನೆಗಳನ್ನ ಕೊಡುತ್ತಿವೆ. ನಿಮ್ಮಿಂದ ಕೊಡಲು ಆಗದಿದ್ದರೆ ಸದನದಲ್ಲಿ ಚರ್ಚೆ ಮಾಡಿ, ಬಜೆಟ್‌ನಲ್ಲಿ ನಿಧಿ ಸಂಗ್ರಹದ ಬಗ್ಗೆ ಪ್ಲಾನ್ ಮಾಡಿ. ಅದನ್ನು ಬಿಟ್ಟು ಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದುರ್ಮರಣ

ಅನುದಾನದ ವಿಚಾರದಲ್ಲಿ ತಾರತಮ್ಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೆಚ್ಚು ತೆರಿಗೆ ಪಾಲು ಕೊಡ್ತಾ ಇದೀವಿ ಅಂದ ಮಾತ್ರಕ್ಕೆ ಹೆಚ್ಚು ಅನುದಾನ ಕೊಟ್ಟಿಲ್ಲ ಅನ್ನೋದು ಸರಿಯಲ್ಲ. ಕಲಬುರಗಿ, ಯಾದಗಿರಿ ಅಂತಹ ಪ್ರದೇಶಗಳಿಂದಲೂ ತೆರಿಗೆ ಸಂಗ್ರಹ ಆಗುತ್ತದೆ. ಆದ್ರೆ ಬೆಂಗಳೂರಿಗೆ ಅನುದಾನ ಹೆಚ್ಚು ಕೊಡೋದು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನೂ ಚಿಕ್ಕಬಳ್ಳಾಪುರ ಭಾಗದಲ್ಲಿ ಅತಿ ಹೆಚ್ಚು ಹೂವು ಹಣ್ಣು ಬೆಳೆಯಲಾಗುತ್ತಿದ್ದು, ಕೋಲ್ಡ್ ಸ್ಟೋರೇಜ್ ಕೊರತೆ ಕಾಡುತ್ತಿರುವ ಬಗ್ಗೆ ಉತ್ತರಿಸಿ, ರಾಜ್ಯ ಸರ್ಕಾರದಿಂದ ಬೇಡಿಕೆಯೇ ಬಂದಿಲ್ಲ. ಬಜೆಟ್ ನಲ್ಲಿ ಹಣ ಇದೆ, ಆದರೆ ರಾಜ್ಯ ಸರ್ಕಾರ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ್ಯೂಸಲ್ಲಿ ಮತ್ತು ಬರುವ ಔಷಧಿ ಬೆರೆಸಿಕೊಟ್ಟು ಅತ್ಯಾಚಾರ – ಬೆತ್ತಲೆ ವಿಡಿಯೋ ಚಿತ್ರೀಕರಿಸಿ ವಿವಾಹಿತೆಗೆ ಬ್ಲ್ಯಾಕ್‌ಮೇಲ್
