ನವದೆಹಲಿ: ಜನಾಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು, ಅಕ್ಕಿ, ಗೋಧಿ ಸೇರಿದಂತೆ 14 ವಸ್ತುಗಳಿಗೆ ಜಿಎಸ್‍ಟಿ ಹೇರುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
The @GST_Council has exempt from GST, all items specified below in the list, when sold loose, and not pre-packed or pre-labeled.
They will not attract any GST.
The decision is of the @GST_Council and no one member. The process of decision making is given below in 14 tweets. pic.twitter.com/U21L0dW8oG
— Nirmala Sitharaman (@nsitharaman) July 19, 2022
ಬೇಳೆಕಾಳುಗಳು, ಧಾನ್ಯಗಳು, ಹಿಟ್ಟು ಮುಂತಾದ ನಿರ್ದಿಷ್ಟ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ವಿಧಿಸುವ ಬಗ್ಗೆ ತಪ್ಪು ಕಲ್ಪನೆಗಳಿವೆ. ಇದು ಜಿಎಸ್‌ಟಿ ಕೌನ್ಸಿಲ್‌ನ ಸರ್ವಾನುಮತದ ನಿರ್ಧಾರವಾಗಿದ್ದು, ಜೂನ್ 28ರಂದು ಚಂಡೀಗಢದಲ್ಲಿ ನಡೆದ 47ನೇ ಸಭೆಯಲ್ಲಿ ದರ ತರ್ಕಬದ್ಧಗೊಳಿಸುವಿಕೆಯ ಕುರಿತು ಈ ವಿಷಯವನ್ನು ಮಂಡಿಸುವಾಗ ಎಲ್ಲಾ ರಾಜ್ಯಗಳು ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ತೆರೆದ ಕೆಪಿಸಿ ಅಧಿಕಾರಿಗಳು
Advertisement
Advertisement
ಈ ನಿರ್ಧಾರದಲ್ಲಿ ಸಭೆಯಲ್ಲಿದ್ದ ಬಿಜೆಪಿಯೇತರ ರಾಜ್ಯಗಳಾದ ಪಂಜಾಬ್, ಛತ್ತೀಸ್‌ಗಢ, ರಾಜಸ್ಥಾನ, ತಮಿಳುನಾಡು, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ಎಲ್ಲಾ ರಾಜ್ಯಗಳು ಈ ನಿರ್ಧಾರವನ್ನು ಒಪ್ಪಿಕೊಂಡಿವೆ. ಜಿಎಸ್‌ಟಿ ಕೌನ್ಸಿಲ್‌ನ ಈ ನಿರ್ಧಾರವು ಮತ್ತೊಮ್ಮೆ ಒಮ್ಮತದಿಂದ ಬಂದಿದೆ ಎಂದು ಜಿಎಸ್‌ಟಿ ದರ ಏರಿಕೆಯ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಡಿಕೆಶಿ ಶಾಲೆಗೆ ಬಾಂಬ್ ಬೆದರಿಕೆ!