ನವದೆಹಲಿ: ಕೊರೊನಾದಿಂದ ಕಂಗೆಟ್ಟವರಿಗೆ ಪ್ರಧಾನಿ ಮಂತ್ರಿ ನಿಧಿಯಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 1.70 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
There will be Rs 50 lakh insurance per health care worker as a medical insurance cover for them for three months. Hopefully, we would be able to contain the virus in this period: Finance Minister Nirmala Sitharaman pic.twitter.com/SaLbeXULZN
— ANI (@ANI) March 26, 2020
Advertisement
ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದ್ದಾರೆ. ಇದು ಜನರ ಜೀವನ ಮತ್ತು ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಹೀಗಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಕೊರೊನಾ ವೈರಸ್ ಬಿಕ್ಕಟ್ಟಿನಿಂದ ಹೊರಬರಲು 1.70 ಲಕ್ಷ ಕೋಟಿ ರೂ. ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ.
Advertisement
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅಕ್ಕಿ ಯೋಜನೆ ಅಡಿ ಈಗಾಗಲೇ 5 ಕೆಜಿ ಅಕ್ಕಿ/ ಗೋಧಿ ನೀಡಲಾಗುತ್ತಿದೆ. ಇದರ ಜೊತೆ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.
Advertisement
8.69 crore farmers to be immediately benefited through Direct cash transfers. Installment of Rs 2000 in the first week of April will be transferred: Finance Minister Nirmala Sitharaman pic.twitter.com/4GUya62zaC
— ANI (@ANI) March 26, 2020
Advertisement
ವಲಸೆ ಕಾರ್ಮಿಕರು, ನಗರ ಮತ್ತು ಗ್ರಾಮೀಣ ಬಡವವರಿಗೆ, ತಕ್ಷಣದ ಸಹಾಯದ ಅಗತ್ಯವಿರುವ ಬಡವರಿಗೆ ಪ್ಯಾಕೇಜ್ ಸಿದ್ಧವಾಗಿದೆ. ಯಾರೂ ಹಸಿವಿನಿಂದ ಬಳಲಬಾರದು ಎನ್ನುವುದು ನಮ್ಮ ಸರ್ಕಾರ ಉದ್ದೇಶ. ಹೀಗಾಗಿ 1.7 ಲಕ್ಷ ಕೋಟಿ ರೂ. ಮೌಲ್ಯದ ಪ್ಯಾಕೇಜ್ ಘೋಷಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
8.69 ಕೋಟಿ ರೂ. ರೈತರ ಖಾತೆಗೆ ಈ ಕೂಡಲೇ ಏಪ್ರಿಲ್ ತಿಂಗಳ 2 ಸಾವಿರ ರೂ. ಹಣವನ್ನು ಹಾಕಲಾಗುವುದು. ನರೇಗಾ ಯೋಜನೆ ಅಡಿ ಕೆಲಸ ಮಾಡುವ ಪ್ರತಿ ಕಾರ್ಮಿಕರಿಗೆ 2 ಸಾವಿರ ರೂ. ಹೆಚ್ಚುವರಿಯಾಗಿ ನೀಡಲಾಗುವುದು ಎಂದರು.
ಸುದ್ದಿಗೋಷ್ಠಿಯ ಮುಖ್ಯಾಂಶಗಳು
– ಕೊರೊನಾ ವೈರಸ್ ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿರುವವರು, ಸೋಂಕಿನ ಅಪಾಯ ಇರುವವರಿಗೆ ಆರೋಗ್ಯ ವಿಮೆ. ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ವಿಮೆ.
– ವಿಧವೆಯರು, ಹಿರಿಯ ನಾಗರಿಕರು, ದಿವ್ಯಾಂಗರು ಅಂಗವಿಕರಿಗೆ ಒಂದು ಬಾರಿಯ ಪರಿಹಾರ ಮೊತ್ತ 1,000 ರೂ. ಸಿಗಲಿದೆ. ಎರಡು ಕಂತುಗಳಲ್ಲಿ ಹಣ ಬಿಡುಗಡೆಯಾಗಲಿದ್ದು, ಸುಮಾರು 3 ಕೋಟಿ ಜನರಿಗೆ ಇದರಿಂದ ಅನುಕೂಲ.
– 3 ತಿಂಗಳ ಕಾಲ ಮಹಿಳಾ ಜನ ಧನ್ ಖಾತೆಗೆ 500 ರೂ. ಹಾಕಲಾಗುವುದು. ಉಜ್ವಲ ಯೋಜನೆ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ಪಡೆದಿರುವ ಮಹಿಳೆಯರಿಗೆ 3 ತಿಂಗಳ ವರೆಗೂ ಮೂರು ಅನಿಲ ಸಿಲಿಂಡರ್‍ಗಳು ಉಚಿತ ವಿತರಣೆ. ಈ ನಿರ್ಧಾರದಿಂಧ 8 ಕೋಟಿ ಮಹಿಳೆಯರು ಲಾಭ.
– ಮುಂದಿನ ತಿಂಗಳ ಸಂಸ್ಥೆಗಳು ಮತ್ತು ಉದ್ಯೋಗಿಗಳ ಇಪಿಎಫ್ ಮೊತ್ತವನ್ನು ಸರ್ಕಾರವೇ ತುಂಬಲಿದೆ. 100 ಉದ್ಯೋಗಿಗಳು ಇರುವ ಸಂಸ್ಥೆ ಹಾಗೂ ತಿಂಗಳಿಗೆ 15,000 ರೂ.ವರೆಗೂ ವೇತನ ಪಡೆಯುತ್ತಿರುವ ಉದ್ಯೋಗಿಗಳಿರುವ ಸಂಸ್ಥೆಗಳಿಗೆ ಇದರ ಲಾಭ ಸಿಗಲಿದೆ.
– ಇಪಿಎಫ್ ಯೋಜನೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಮರು ಪಾವತಿ ಮಾಡದಿರದ ವ್ಯವಸ್ಥೆಯಡಿ ಶೇ.75ರಷ್ಟು ಇಪಿಎಫ್ ಮುಂಗಡ ಮೊತ್ತ ಪಡೆಯಲು ಅವಕಾಶ ಸಿಗುತ್ತದೆ. ಕಾರ್ಮಿಕರು 3 ತಿಂಗಳ ಸಂಬಳ ಅಥವಾ ಶೇ.75ರಷ್ಟು ಮುಂಗಡ ಮೊತ್ತ;, ಇದರಲ್ಲಿ ಯಾವುದು ಕಡಿಮೆಯೋ ಅದನ್ನು ಪಡೆಯಬಹುದಾಗಿದೆ. ಇದರಿಂದ ಇಪಿಎಫ್ ನೋಂದಾಯಿಸಿರುವ ಸುಮಾರು 4.8 ಕೋಟಿ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.
https://www.youtube.com/watch?v=15Y8lx-A4wA&feature=emb_title