ಮಂಗಳೂರು: ಸರ್ಕಾರಗಳು ಮಾಡಲಾಗದ ಯೋಜನೆಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗೆಡೆಯವರು ಜಾರಿಗೆ ತಂದಿದ್ದಾರೆಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಆರಂಭಿಸಲಾಗಿರುವ ಆರೋಗ್ಯ ವಿಮೆ ಪ್ರಗತಿ ರಕ್ಷಾ ಕವಚ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಚಿಕ್ಕವಳಿದ್ದಾಗ ಧರ್ಮಸ್ಥಳಕ್ಕೆ ಹೆತ್ತವರ ಜೊತೆ ಬಂದಿದ್ದೆ. ಆದರೆ ಇಂದು ರಕ್ಷಣಾ ಸಚಿವೆಯಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ನನ್ನ ಸೌಭಾಗ್ಯ. ಧರ್ಮಸ್ಥಳದಲ್ಲಿ ಧರ್ಮ, ನ್ಯಾಯದಿಂದ ಕೂಡಿದೆ ಎಂದು ಹೇಳಿದರು.
Advertisement
Advertisement
ಸಾಲವನ್ನು ತೀರಿಸಲಾಗದೇ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭಗಳಲ್ಲಿ ಗ್ರಾಮಾಭಿವೃದ್ಧಿ ಯೋಜನೆಯು ಜನರ ಸಾಲದ ಭಯವನ್ನು ಹೋಗಲಾಡಿಸಿದೆ. ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರು ಸರ್ಕಾರ ಮಾಡಲಾಗದ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.
Advertisement
ಕಾರ್ಯಕ್ರಮಕ್ಕೂ ಮುನ್ನ ಸಚಿವೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಮತ್ತು ಭಾರತೀಯ ಜೀವ ವಿಮಾ ನಿಗಮಗಳು ಜಂಟಿಯಾಗಿ ಎಸ್‌ಕೆಡಿಆರ್‌ಡಿಪಿ ಸದಸ್ಯರಿಗಾಗಿ ರೂಪಿಸಿರುವ `ಪ್ರಗತಿ ರಕ್ಷಾ ಕವಚ್’ ವಿಮಾ ಯೋಜನೆಗೆ ಅಧಿಕೃತ ಚಾಲನೆ ನೀಡಿದರು.
Advertisement
ಏನಿದು ಪ್ರಗತಿ ರಕ್ಷಾ ಕವಚ್ ಯೋಜನೆ?
ಎಸ್‌ಕೆಡಿಆರ್‌ಡಿಪಿ ಸದಸ್ಯರು ಅಕಾಲಿಕವಾಗಿ ಮೃತಪಟ್ಟ ಸಂದರ್ಭಗಳಲ್ಲಿ ಅವರು ಪಡೆದ ಸಾಲದ ಬಾಕಿಯನ್ನು ತಪ್ಪಿಸಲು ಹಾಗೂ ಮೃತರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಈ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳ ಧರ್ಮಾಧಿಕಾರಿಗಳಾದ ವಿರೇಂದ್ರ ಹೆಗ್ಗಡೆಯವರು ವಹಿಸಿಕೊಂಡಿದ್ದರು. ಸಮಾರಂಭಕ್ಕೆ ಹೇಮಾವತಿ ಹೆಗ್ಗಡೆ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಎಸ್.ಅಂಗಾರ, ಸಂಜೀವ ಮಠಂದೂರು, ಭಾರತೀಯ ಜೀವ ವಿಮಾ ನಿಗಮದ ಅಧ್ಯಕ್ಷ ವಿ.ಕೆ.ಶರ್ಮ, ನಿರ್ದೇಶಕ ಕದಿರೇಶನ್, ಸುಶೀಲ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv