ಬೆಂಗಳೂರು: ಅರ್ಥಹೀನ ಹೇಳಿಕೆಗಳಿಂದಲೇ ಅಪಖ್ಯಾತಿ ಗಳಿಸಿರುವ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಹಣದುಬ್ಬರದ ಬಗ್ಗೆ ಅರ್ಥಹೀನ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ.
Advertisement
ವಾಷಿಂಗ್ಟನ್‍ನ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್ ಅವರು, ಜಾಗತಿಕ ಮಟ್ಟದಲ್ಲಿ ಸವಾಲುಗಳಿವೆ. ಭಾರತದಲ್ಲಿ ಹಣದುಬ್ಬರ ದರವು ಮಾರ್ಚ್‍ನಲ್ಲಿ ಸೇ.6.9 ರಷ್ಟಿದೆ. ಹಣದುಬ್ಬರವು ಗರಿಷ್ಠ ಸೇ 6ರವರೆಗೆ ತಲುಪಲು ಅವಕಾಶವಿದೆ. ಆ ಗಡಿಯನ್ನು ನಾವು ದಾಟಿದ್ದೇವೆ. ಆದರೆ ಹಣದುಬ್ಬರದ ಈ ಏರಿಕೆ ಅತಿಯಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ದಿಂಗಾಲೇಶ್ವರ ಶ್ರೀಗಳಿಗೆ ತಲೆ ಸರಿ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ
Advertisement
ಇದೀಗ ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ಅರ್ಥಹೀನ ಹೇಳಿಕೆಗಳಿಂದಲೇ ಅಪಖ್ಯಾತಿ ಗಳಿಸಿರುವ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್, ಈಗ ಹಣದುಬ್ಬರದ ಬಗ್ಗೆ ಮತ್ತೊಮ್ಮೆ ಅರ್ಥಹೀನ ಮಾತನಾಡಿದ್ದಾರೆ. ದೇಶದ ಚಿಲ್ಲರೆ ಹಣದುಬ್ಬರ ದರ 17 ತಿಂಗಳ ಗರಿಷ್ಟ ಮಟ್ಟ 6.9 ಕ್ಕೆ ತಲುಪಿದೆ. ಸಗಟು ಹಣದುಬ್ಬರ ದರ 4 ತಿಂಗಳ ಗರಿಷ್ಠ ಮಟ್ಟ ಶೇ 14.55ಕ್ಕೆ ತಲುಪಿದೆ. ಇಷ್ಟಾದರೂ ಹಣದುಬ್ಬರ ಅತಿಯಾಗಿ ಏರಿಕೆಯಾಗಿಲ್ಲ ಎಂದರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ.
Advertisement
Advertisement
ಏರುತ್ತಿರುವ ಸಗಟು ಹಣದುಬ್ಬರ ಭವಿಷ್ಯದಲ್ಲಿ ಚಿಲ್ಲರೆ ಹಣದುಬ್ಬರದ ಮೇಲೂ ನೇರ ಪರಿಣಾಮ ಬೀರಲಿದೆ. ಈಗಾಗಲೇ ಬೆಲೆಯೇರಿಕೆಯಿಂದ ಜನಸಾಮಾನ್ಯ ತತ್ತರಿಸಿದ್ದಾನೆ. ಹಣದುಬ್ಬರ ಹೀಗೆ ಏರುತ್ತಿದ್ದರೆ ಜನರ ಬದುಕು ಏನಾಗಬೇಕು? ಹಣದುಬ್ಬರದ ಬಗ್ಗೆ ಆರ್ಥಿಕ ತಜ್ಞರ ಆತಂಕ ಭಾರತದ ಮಟ್ಟಿಗೆ ಎಚ್ಚರಿಕೆಯ ಕರೆಗಂಟೆ. ಅರ್ಥ ಸಚಿವರು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.
ಹಣದುಬ್ಬರ ನಿಯಂತ್ರಿಸಲು ಸ್ವತಃ RBI ಕೂಡ ಹೆಣಗಾಡುತ್ತಿದೆ. ಹೀಗಿರುವಾಗ ನಿರ್ಮಲಾ ಸೀತಾರಾಮನ್ ಅವಾಸ್ತವಿಕ ಅಂಕಿ ಅಂಶಗಳ ಮೂಲಕ ದೇಶದ ದಾರಿ ತಪ್ಪಿಸಬಾರದು. ಬಹುಶಃ ಅರ್ಥಸಚಿವರಿಗೆ ಹಣಕಾಸು ಇಲಾಖೆಯ ಮಹತ್ವವೇ ಗೊತ್ತಿಲ್ಲ. ಆರ್ಥಿಕ ನಿರ್ವಹಣೆ ಪೂರ್ವಾಶ್ರಮದಲ್ಲಿ TV ಡಿಬೇಟ್ಗಳ ಪ್ಯಾನೆಲಿಸ್ಟ್ ಆಗಿ ಕೂಗಿದಷ್ಟು ಸರಳವಲ್ಲ ಎಂದು ಸಚಿವೆ ತಿಳಿದುಕೊಳ್ಳಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಹಾಕಿದ್ದ ಕಿಡಿಗೇಡಿಗಳು
3
ಹಣದುಬ್ಬರ ನಿಯಂತ್ರಿಸಲು @RBI ಕೂಡ ಹೆಣಗಾಡುತ್ತಿದೆ.
ಹೀಗಿರುವಾಗ @nsitharaman ಅವಾಸ್ತವಿಕ ಅಂಕಿ ಅಂಶಗಳ ಮೂಲಕ ದೇಶದ ದಾರಿ ತಪ್ಪಿಸಬಾರದು.
ಬಹುಶಃ ಅರ್ಥಸಚಿವರಿಗೆ ಹಣಕಾಸು ಇಲಾಖೆಯ ಮಹತ್ವವೇ ಗೊತ್ತಿಲ್ಲ.
ಆರ್ಥಿಕ ನಿರ್ವಹಣೆ ಪೂರ್ವಾಶ್ರಮದಲ್ಲಿ TV ಡಿಬೇಟ್ಗಳ ಪ್ಯಾನೆಲಿಸ್ಟ್ ಆಗಿ ಕೂಗಿದಷ್ಟು ಸರಳವಲ್ಲ ಎಂದು ಸಚಿವೆ ತಿಳಿದುಕೊಳ್ಳಲಿ
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 21, 2022