ನವದೆಹಲಿ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗಡಿ ಪ್ರದೇಶದಲ್ಲಿ ಚೀನಿ ಸೈನಿಕರಿಗೆ ಭಾರತೀಯ ನಮಸ್ಕಾರದ ಅರ್ಥವನ್ನು ತಿಳಿ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.
Acknowledged a row of Chinese soldiers from across the fence who were taking pictures on my reaching Nathu La. @DefenceMinIndia pic.twitter.com/7cWImtmfLG
— Nirmala Sitharaman (@nsitharaman) October 7, 2017
Advertisement
ಭಾರತ ಮತ್ತು ಚೀನಾ ಗಡಿ ಪ್ರದೇಶದ ನಾಥುಲಾ ದಲ್ಲಿ ಭಾನುವಾರ ಇಂಡೋ-ಟಿಬೆಟಿಯನ್ ಸೈನಿಕರನ್ನು ಭೇಟಿ ಮಾಡಿದ್ದ ರಕ್ಷಣಾ ಸಚಿವರು ತಮ್ಮ ಭೇಟಿಯ ಕುರಿತು ಟ್ವಿಟ್ಟರ್‍ನಲ್ಲಿ ಫೋಟೋವನ್ನು ಪೋಸ್ಟ್ ಮಾಡಿದ್ದರು. ನಂತರ ಸೇನಾ ಅಧಿಕಾರಿಗಳೊಂದಿಗೆ ತೆರಳಿ ಚೀನಾ ಸೈನಿಕರನ್ನು ಭೇಟಿ ಮಾಡಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.
Advertisement
Snippet of Smt @nsitharaman interacting with Chinese soldiers at the border at Nathu-la in Sikkim yesterday. Namaste! pic.twitter.com/jmNCNFaGep
— रक्षा मंत्री कार्यालय/ RMO India (@DefenceMinIndia) October 8, 2017
Advertisement
ವಿಡಿಯೋದಲ್ಲಿ ರಕ್ಷಣಾ ಸಚಿವರು ಚೀನಿ ಸೈನಿಕರೊಂದಿಗೆ ಮಾತುಕತೆ ನಡೆಸಿದ್ದು, ಆ ವೇಳೆ ಭಾರತೀಯ ನಮಸ್ಕಾರದ ಮಹತ್ವವನ್ನು ತಿಳಿ ಹೇಳಿದ್ದಾರೆ. ಈ ವಿಡಿಯೋವನ್ನು ಸ್ವತಃ ರಕ್ಷಣಾ ಸಚಿವರೇ ಟ್ವೀಟ್ ಮಾಡಿದ್ದಾರೆ. ಲಾಥುಲಾ ಗಡಿಯನ್ನು ಭೇಟಿ ಮಾಡಿದ ವೇಳೆ ಚೀನಿ ಸೈನಿಕರು ಸತತವಾಗಿ ತನ್ನ ಫೋಟೋಗಳನ್ನು ತೆಗೆಯುತ್ತಿದ್ದರು ಎಂದು ತಮ್ಮ ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.
Advertisement
Upon arrival Smt @nsitharaman is accorded with a Guard of Honor at Nathu-la pic.twitter.com/UdVGnAyRh1
— रक्षा मंत्री कार्यालय/ RMO India (@DefenceMinIndia) October 7, 2017
ಇಂಡೋ-ಚೀನಾ ಗಡಿಯಲ್ಲಿ ಕೈಗೊಂಡಿರುವ ರಕ್ಷಣಾ ಕಾರ್ಯಗಳನ್ನು ವೀಕ್ಷಿಸಲು ಸಚಿವೆ ಸೀತಾರಾಮನ್ ತೆರಳಿದ್ದರು. ಡೋಕ್ಲಾಂ ಗಡಿ ಪ್ರದೇಶದಲ್ಲಿ ಚೀನಾ ತನ್ನ ಸೈನಿಕರನ್ನು ಹಿಂಪಡೆದಿಲ್ಲ ಎಂಬ ಸಂಗತಿಯನ್ನು ಭಾರತೀಯ ರಕ್ಷಣಾ ಅಧಿಕಾರಿಗಳು ಸ್ಪಷ್ಟಪಡಿಸಿದ ನಂತರ ಗಡಿ ಪ್ರದೇಶಕ್ಕೆ ಭೇಟಿ ನೀಡಲಾಗಿದೆ. ಈ ಹಿಂದೆ ಡೋಕ್ಲಾಂ ಗಡಿ ಪ್ರದೇಶದಲ್ಲಿ ಚೀನಾ ನಿರ್ಮಿಸಿಸುತ್ತಿದ್ದ ರಸ್ತೆಯ ವಿರೋಧಿಸಿ ಭಾರತೀಯ ಸೈನಿಕರು ಹಾಗೂ ಚೀನಿ ಪಡೆಗೆ ಸಂಘರ್ಷ ಉಂಟಾಗಿತ್ತು. ಈ ಸ್ಥಳದಿಂದ ಕೇವಲ 10 ಕಿ.ಮೀ. ದೂರದಲ್ಲಿ ಚೀನಾ ಮತ್ತೆ ರಸ್ತೆಯನ್ನು ನಿರ್ಮಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿತ್ತು. ಹಾಗಿದ್ದರೂ ಡೋಕ್ಲಾಂ ಪ್ರದೇಶದಲ್ಲಿ ಯಥಾಸ್ಥಿತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
In response to recent press reports about Doklam, our statement : pic.twitter.com/vIUp4xvFXR
— Arindam Bagchi (@MEAIndia) October 6, 2017