ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ

Public TV
1 Min Read
Nirmalanandanatha Swamiji HDK

ಬೆಂಗಳೂರು: ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು (H.D. Kumaraswamy) ಭಾನುವಾರ ಆದಿಚುಂಚನಗಿರಿ ಶ್ರೀಗಳು (Nirmalanandanatha Swamiji) ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

hd kumaraswamy hospital

ಆಸ್ಪತ್ರೆಗೆ ತೆರಳಿ ಶ್ರೀಗಳು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದರು. ವಿಶ್ರಾಂತಿ ಪಡೆದು ಶೀಘ್ರ ಗುಣಮುಖರಾಗಿ ಎಂದು ಶ್ರೀಗಳು ಹಾರೈಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ತಾರಾ ಮೆರುಗು

ನಿರಂತರ ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ತೊಡಗಿಕೊಂಡ ಪರಿಣಾಮ ಕುಮಾರಸ್ವಾಮಿಯವರಿಗೆ ಜ್ವರ ಕಾಣಿಸಿಕೊಂಡಿತ್ತು. ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಅವರು ಶನಿವಾರ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ವಿಶ್ರಾಂತಿ ನಂತರ ಚುನಾವಣಾ (Election) ಪ್ರಚಾರದಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ (JDS) ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲೇ ಕುಳಿತು ಪ್ರಚಾರದ ರೂಟ್ ಮ್ಯಾಪ್ ಸಿದ್ಧಪಡಿಸಿದ ಹೆಚ್‌ಡಿಕೆ

Share This Article