ಕನ್ನಡದ ನಟಿ ನಿತ್ಯಾ ಮೆನನ್ (Nithya Menen) ಮತ್ತೆ ಸುದ್ದಿಯಲ್ಲಿದ್ದಾರೆ. ನಟಿ ಜೊತೆ ತಮಿಳು ನಟ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ಸುದ್ದಿ ಮತ್ತೆ ವೈರಲ್ ಆಗ್ತಿದ್ದು, ಈ ಬಗ್ಗೆ ‘ಮೈನಾ’ (Mynaa) ನಾಯಕಿ ನಿತ್ಯಾ ಮೆನನ್ ಸ್ಪಷ್ಟನೆ ನೀಡಿದ್ದಾರೆ.
ಕಾಲಿವುಡ್‌ನ ನಾಯಕನೊಬ್ಬ (Kollywood Hero) ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಶೂಟಿಂಗ್ ಸಮಯದಲ್ಲಿ ಅವರು ತನ್ನನ್ನು ಸ್ಪರ್ಶಿಸುವ ಮೂಲಕ ತುಂಬಾ ಹಿಂಸೆ ನೀಡಿದ್ದರು. ನಾಯಕನ ಹುಚ್ಚು ವರ್ತನೆಯಿಂದ ಸರಿಯಾಗಿ ಶೂಟಿಂಗ್‌ನಲ್ಲಿ ಭಾಗವಹಿಸಲು ಆಗುತ್ತಿರಲಿಲ್ಲ ಎಂಬ ಎನ್ನಲಾದ ಸುದ್ದಿಗೆ ನಿತ್ಯಾ ಮೆನನ್ ಪ್ರತಿಕ್ರಿಯಿಸಿ, ಈ ಸುದ್ದಿ ಸುಳ್ಳು ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ತಮಿಳು ನಟ, ತಮಿಳು ಚಿತ್ರರಂಗದ ವಿರುದ್ಧ ತಾವು ಯಾವುದೇ ಹೇಳಿಕೆ ನೀಡಿಲ್ಲ. ಇದೆಲ್ಲಾ ಸುಳ್ಳು ಸುದ್ದಿ ಎಂದು ಸ್ವತಃ ನಟಿ ಸ್ಪಷ್ಟನೆ ನೀಡಿದ್ದಾರೆ. ಸುಳ್ಳು ಸುದ್ದಿ ವೈರಲ್ ಆಗಿರೋದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.
ಕುಮಾರಿ ಶ್ರೀಮತಿ ಎಂಬ ವೆಬ್ ಸಿರೀಸ್‌ನಲ್ಲಿ ನಿತ್ಯಾ ಮೆನನ್ ನಟಿಸಿದ್ದಾರೆ. ಸೆ.28ಕ್ಕೆ ಬಹುಭಾಷೆಗಳಲ್ಲಿ ಓಟಿಟಿಯಲ್ಲಿ ರಿಲೀಸ್ ಆಗುತ್ತಿದೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]