ಜೋಶ್, ಮೈನಾ (Mynaa) ಸಿನಿಮಾಗಳ ಮನೆಗೆದ್ದಿರೋ ನಿತ್ಯಾ ಮೆನನ್‌ಗೆ (Nithya Menen) ಪರಭಾಷೆಯಲ್ಲಿ ಭಾರೀ ಬೇಡಿಕೆ ಇದೆ. ಇದೀಗ ಸಂದರ್ಶನವೊಂದರಲ್ಲಿ ತಮ್ಮ ದೇಹದ ಅಂಗಾಂಗಗಳ (Body Shaming) ಬಗ್ಗೆ ತಾವು ಎದುರಿಸಿದ ಟೀಕೆಯ ಬಗ್ಗೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ನಿತ್ಯಾ ಮುಕ್ತವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:5 ತಿಂಗಳ ಹಸುಗೂಸಿನ ಜೊತೆ ಅಮಲಾ ದಂಪತಿ ಬಾಲಿ ವೆಕೇಷನ್
ತೆಲುಗು ಸಿನಿಮಾವೊಂದರಲ್ಲಿ ನಿತ್ಯಾ ನಟಿಸುವಾಗ ಅವರ ಗುಂಗುರು ಕೂದಲನ್ನು ಯಾರು ಇಷ್ಟಪಡಲಿಲ್ಲವಂತೆ. ನಾನು ಫಸ್ಟ್ ಟೈಮ್ ಸೆಟ್‌ಗೆ ಬಂದಾಗ ಎಲ್ಲರೂ ವಿಚಿತ್ರವಾಗಿ ನೋಡುತ್ತಿದ್ದರು. ನಾಯಕಿ ಅಂದ್ಮೇಲೆ ದೇಹದ ತೂಕದ ಬಗ್ಗೆ ಮಾತನಾಡಿದರು. ಅದಕ್ಕೆಲ್ಲಾ ನಾನು ತಲೆ ಕೆಡಿಸಿಕೊಳ್ಳಲಿಲ್ಲ ಎಂದಿದ್ದಾರೆ.
ನಾನು ದಪ್ಪ ಮತ್ತು ಕುಳ್ಳಗೆ ಇದ್ದೇನೆ ಎಂದು ಎಲ್ಲರೂ ಅಪಹಾಸ್ಯ ಮಾಡಿದರು. ನನಗೆ ಗುಂಗುರು ಕೂದಲು ಮತ್ತು ದೊಡ್ಡ ಹುಬ್ಬು ಇದೆ ಎಂದು ಅನೇಕರು ಟೀಕೆ ಮಾಡಿದರು. ಯಾರನ್ನಾದರೂ ಅವರ ರೂಪದ ಆಧಾರದ ಮೇಲೆ ನೀವು ಹೇಗೆ ಟೀಕಿಸುತ್ತೀರಿ? ಎಂದಿದ್ದಾರೆ. ಅದು ಅವರ ಕೀಳು ಮಟ್ಟದ ಮನಸ್ಥಿತಿ ಎಂದು ಖಡಕ್ ಆಗಿ ನಿತ್ಯಾ ಮಾತನಾಡಿದ್ದಾರೆ. ಸವಾಲುಗಳನ್ನು ಎದುರಿಸಿ ಉತ್ತಮ ವ್ಯಕ್ತಿಯಾಗಲು ಪ್ರಯತ್ನಿಸಬೇಕು ಎಂದು ನಟಿ ಹೇಳಿದ್ದಾರೆ.