ಉಡುಪಿ ಪೇಟೆಯಲ್ಲಿ ಓಮಿಕ್ರಾನ್ ಓಡಾಟ – ಜನಜಾಗೃತಿ ಮೂಡಿಸಿದ ಪಬ್ಲಿಕ್ ಹೀರೋ

Public TV
2 Min Read
UDP CORONA AWARNESS 3

ಉಡುಪಿ: ಕೊರೊನಾ ಸಾಂಕ್ರಾಮಿಕ ತಡೆಗಟ್ಟಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಮಾಡಿದೆ. ಸಬೂಬುಗಳನ್ನು ಹೇಳಿ ಜನ ಓಡಾಡುವ ಸಂಖ್ಯೆ ಜಾಸ್ತಿ ಇದೆ. ಕೆಲವರು ಮಾಸ್ಕ್ ಧರಿಸದೆ ಓಡಾಡುತ್ತಿದ್ದಾರೆ. ಜನಜಾಗೃತಿ ಮೂಡಿಸುವ ಉದ್ದೇಶದಿಂದ ಉಡುಪಿ ಪಬ್ಲಿಕ್ ಹೀರೋ ನಿತ್ಯಾನಂದ ಒಳಕಾಡು ಓಮಿಕ್ರಾನ್ ವೇಷ ಧರಿಸಿದ್ದಾರೆ.

UDP CORONA AWARNESS 2

ಉಡುಪಿ ಜಿಲ್ಲಾ ನಾಗರಿಕ ಸಮಿತಿ ಇವತ್ತು ವಿಶಿಷ್ಟ ರೀತಿಯ ಕೊರೊನಾ ಜನ ಜಾಗೃತಿ ಕಾರ್ಯ ಹಮ್ಮಿಕೊಂಡಿತ್ತು. ಕೊರೊನಾ ಮೂರನೇ ಅಲೆಯ ಭೀತಿ ಎದುರಾಗಿದ್ದು ಸೋಂಕು ಹರಡದಂತೆ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಜಾಗೃತಿ ಮೂಡಿಸಲು ಈ ಅಭಿಯಾನ ನಡೆಯಿತು. ಸಂಚಾಲಕ ನಿತ್ಯಾನಂದ ಒಳಕಾಡು ಖುದ್ದು ಕೊರೊನಾ ವೇಷ ಧರಿಸಿ, ಕೆಲಕಾಲ ನಗರದ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿದರು. ಇದನ್ನೂ ಓದಿ: ತುರ್ತು ಚಿಕಿತ್ಸೆ ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗೆ ಬರುವಂತಿಲ್ಲ: ಸರ್ಕಾರ ಸೂಚನೆ

ಜಾಗೃತಿ ಅಭಿಯಾನಕ್ಕೆ ನಗರ ಠಾಣೆ ಇನ್ಸ್‌ಪೆಕ್ಟರ್‌ ಹರೀಶ್ ಚಾಲನೆ ನೀಡಿದರು. ಕಲ್ಸಂಕ, ಸಿಟಿ ಬಸ್ ನಿಲ್ದಾಣ ಮತ್ತು ಸರ್ವಿಸ್ ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಬಗ್ಗೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜನರಲ್ಲಿ ಮತ್ತು ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲಾಯಿತು. ಕೊರೊನಾ ಹತೋಟಿಗೆ ಬರುವತನಕ ಅಭಿಯಾನ ಮುಂದುವರಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಇಂದು 32,793 ಕೇಸ್ – ಬೆಂಗಳೂರಿನಲ್ಲಿ 129 ಸಾವಿರ ಸಕ್ರಿಯ ಪ್ರಕರಣ

UDP CORONA AWARNESS 1

ನಗರ ಠಾಣೆ ಎಎಸ್‍ಐ ಹರೀಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಕೊರೊನಾ ಬಗ್ಗೆ ಸರ್ಕಾರ, ಪೊಲೀಸರು, ಮಾಧ್ಯಮಗಳು ಜನ ಜಾಗೃತಿ ಮೂಡಿಸುತ್ತಿದ್ದರೂ ಜನಕ್ಕೆ ಸಾಂಕ್ರಾಮಿಕ ರೋಗದ ಭಯ ಹೋದಂತಿದೆ. ಈ ತರದ ವಿಭಿನ್ನ ಕಾರ್ಯಕ್ರಮಗಳನ್ನು ಮಾಡುವ ಮೂಲಕ ನಿತ್ಯಾನಂದ ಒಳಕಾಡು ಸಮಾಜ ಸೇವಾ ಚಟುವಟಿಕೆಯನ್ನು ಮುಂದುವರಿಸಿದ್ದಾರೆ ಎಂದರು. ಇದನ್ನೂ ಓದಿ: ಹಾರೆಯಿಂದ ಹೊಡೆದು ಪತ್ನಿಯ ಕೊಲೆ – ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

UDP CORONA AWARNESS

ನಿತ್ಯಾನಂದ ಒಳಕಾಡು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಮೂರು ವರ್ಷಗಳಿಂದ ಆಂಬುಲೆನ್ಸ್ ಮೂಲಕ ಉಚಿತ ಆರೋಗ್ಯ ಸೇವೆ ನೀಡುತ್ತಿದ್ದೇನೆ. ಸ್ವತಃ ನನಗೂ ಕೊರೊನಾ ಸಾಂಕ್ರಾಮಿಕ ಬಂದು ಬಹಳ ಕಷ್ಟಪಟ್ಟಿದ್ದೇನೆ. ಸ್ವಂತ ಅನುಭವದಿಂದ ಕಲಿತ ಪಾಠವನ್ನು ಜನಕ್ಕೆ ತಿಳಿಸಬೇಕು ಎಂಬ ಉದ್ದೇಶದಿಂದ ಈ ಅಭಿಯಾನ ಮಾಡಲಾಗುತ್ತಿದೆ. ಕೊರೊನಾ ಇಳಿಮುಖ ಆಗುವವರೆಗೂ ಜಿಲ್ಲೆಯ ಅಲ್ಲಲ್ಲಿ ಜನಜಾಗೃತಿ ಮಾಡಲಾಗುವುದು. ಈ ಕಾರ್ಯಕ್ಕೆ ಸಂಸ್ಥೆಗಳು, ನಾಗರಿಕ ಸಮಿತಿ ನನ್ನೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ – ಮನನೊಂದು ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ

Share This Article
Leave a Comment

Leave a Reply

Your email address will not be published. Required fields are marked *