ಚೆನ್ನೈ: ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಸುದ್ದಿಯಾಗಿದ್ದ ನಿತ್ಯಾನಂದ ಕೆಲವು ದಿನಗಳ ಬಳಿಕ ಫೇಸ್‌ಬುಕ್ ಮೂಲಕ ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದರು. ಇದೀಗ ನಿತ್ಯಾನಂದ ಅವರ ಮೂರ್ತಿಗೆ ಪೂಜೆ ಸಲ್ಲಿಸುತ್ತಿರುವ ವೀಡಿಯೋವೊಂದು ವೈರಲ್ ಆಗುತ್ತಿದ್ದು, ಮತ್ತೆ ಚರ್ಚೆಗೆ ಕಾರಣವಾಗಿದ್ದಾರೆ.
ಕೈಲಾಸದಲ್ಲಿ ತಲೆಮರೆಸಿಕೊಂಡಿರುವ ನಿತ್ಯಾನಂದ ಅವರ ಪ್ರತಿಮೆಯನ್ನು ಸ್ಥಾಪಿಸಿ, ಪೂಜೆ, ಅಭಿಷೇಕ, ಅರ್ಚನೆಗಳನ್ನು ಮಾಡಲಾಗುತ್ತಿದೆ. ಚೈತ್ರ ನಕ್ಷತ್ರ ಹಬ್ಬದ ಹಿನ್ನೆಲೆ ಮೂರ್ತಿಗೆ ಪೂಜೆ ಸಲ್ಲಿಸಲಾಗಿದ್ದು, ಅದರ ವೀಡಿಯೋ ಈಗ ವೈರಲ್ ಆಗುತ್ತಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು
Advertisement
Advertisement
ಕೆಲವು ದಿನಗಳ ಹಿಂದೆ ನಿತ್ಯಾನಂದ ಅವರಿಗೆ ಅನಾರೋಗ್ಯವಿದ್ದ ಹಿನ್ನೆಲೆ ಅವರ ಮರಣ ಸಂಭವಿಸಿದೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಇದರ ಬೆನ್ನಲ್ಲೇ ಕೈಲಾಸದಿಂದ ಸಂದೇಶವೊಂದು ಬಂದಿದ್ದು, ನಿತ್ಯಾನಂದ ಸ್ವಾಮೀಜಿ ಆರೋಗ್ಯವಾಗಿದ್ದಾರೆ, ಶೀಘ್ರವೇ ಭಕ್ತರಿಗೆ ದರ್ಶನ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ: ನಂದಿಬೆಟ್ಟಕ್ಕೆ ಹರಿದು ಬಂದ ಜನಸಾಗರ – ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ನಿಂತು ಹೈರಾಣಾದ ಪ್ರವಾಸಿಗರು
Advertisement
ಇದೀಗ ನಿತ್ಯಾನಂದ ಅವರ ಮೂರ್ತಿಗೆ ಪೂಜೆ ಸಲ್ಲಿಸುತ್ತಿರುವ ವೀಡಿಯೋ ವೈರಲ್ ಆಗುತ್ತಿದ್ದಂತೆ ಜನರಲ್ಲಿ ಮತ್ತೆ ಪ್ರಶ್ನೆ ಎದ್ದಿದೆ. ಅನಾರೋಗ್ಯ ಎಂದಿದ್ದ ಬಳಿಕ ಯಾವುದೇ ಸುಳಿವು ನೀಡದ ನಿತ್ಯಾನಂದ ಸ್ವತಃ ಉತ್ತರಿಸುವವರೆಗೂ ಗೊಂದಲ ಮುಂದುವರಿದಿದೆ.