ನವದೆಹಲಿ: ರಸ್ತೆಗಳಲ್ಲಿನ ಮಾರಣಾಂತಿಕ ಅಪಘಾತಗಳನ್ನು ತಪ್ಪಿಸಲು ಸರ್ಕಾರ ತನ್ನ ಕೈಯಿಂದಾದಷ್ಟು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ನಿನ್ನೆಯಷ್ಟೇ ಕಾರಿನಲ್ಲಿ ಹಿಂಬದಿ ಪ್ರಯಾಣಿಕರಿಗೆ ಸೀಟ್ಬೆಲ್ಟ್ಗಳನ್ನು ಕಡ್ಡಾಯಗೊಳಿಸಿದ್ದು, ಇದೀಗ ಸರ್ಕಾರ 8 ಆಸನಗಳ ವಾಹನಗಳಲ್ಲಿ 6 ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸಲು ಯೋಜಿಸಿದೆ.
ಅಕ್ಟೋಬರ್ನಿಂದ ಕಾರು ತಯಾರಕರು 8 ಆಸನಗಳ ವಾಹನಗಳಲ್ಲಿ ಕನಿಷ್ಠ 6 ಏರ್ಬ್ಯಾಗ್ಗಳನ್ನು ಒದಗಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂಬದಿ ಸವಾರರಿಗೂ ಸೀಟ್ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ
Advertisement
Advertisement
ಈ ಬಗ್ಗೆ ಜನವರಿ 14 ರಂದು ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದರ ಪ್ರಕಾರ ಈ ವರ್ಷದ ಅಕ್ಟೋಬರ್ 1 ರ ಬಳಿಕ ತಯಾರಿಸಲಾಗುವ ಎಂ1 ವರ್ಗದ ವಾಹನಗಳಿಗೆ 2 ಬದಿಯ ಏರ್ಬ್ಯಾಗ್ಗಳನ್ನು ಅಳವಡಿಸಬೇಕು. ಮುಂಭಾಗದ ಔಟ್ಬೋರ್ಡ್ ಆಸನದಲ್ಲಿ ಕುಳಿತುಕೊಳ್ಳುವವರಿಗಾಗಿ ಸುತ್ತಲೂ ಏರ್ಬ್ಯಾಗ್ಗಳನ್ನು ಅಳವಡಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲಿನ ನಿಷೇಧ ವಿಸ್ತರಣೆ
Advertisement
ಈ ವರ್ಷದ ಅಕ್ಟೋಬರ್ನಿಂದ 8 ಪ್ರಯಾಣಿಕರನ್ನು ಹೊತ್ತೊಯ್ಯುವ ವಾಹನಗಳಲ್ಲಿ ಕನಿಷ್ಠ 6 ಏರ್ಬ್ಯಾಗ್ಗಳನ್ನು ಸರ್ಕಾರವು ಕಡ್ಡಾಯಗೊಳಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ, ಗಡ್ಕರಿ ಅವರು ಈ ಬಗ್ಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.