ನವದೆಹಲಿ: ಕೊಳಚೆ ನೀರಿನಿಂದ ಕಾರು, ಟ್ರಕ್, ಬಸ್ ಓಡಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂದು ಖಾಸಗಿವಾಹಿನಿ ವರದಿ ಮಾಡಿದೆ.
6ನೇ ರಾಷ್ಟ್ರೀಯ ಹಣಕಾಸು ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಸಕ್ಕೆ ಮೌಲ್ಯ ತಂದುಕೊಡುವ ಆಲೋಚನೆ ಇದ್ದು, ವಿವಿಧ ನಗರಗಳಲ್ಲಿ ಗ್ರೀನ್ ಹೈಡ್ರೋಜನ್ ಬಳಸಿ ಕಾರು, ಟ್ರಕ್ ಮತ್ತು ಬಸ್‍ಗಳನ್ನು ಓಡಿಸುವ ಯೋಜನೆ ಇದೆ. ನಗರಗಳ ಕೊಳಚೆ ನೀರು ಮತ್ತು ಘನ ತ್ಯಾಜ್ಯದಿಂದ ಉತ್ಪಾದಿಸಬಹುದಾದ ಗ್ರೀನ್ ಹೈಡ್ರೋಜನ್ ಬಳಸಿ ಬಸ್, ಕಾರು ಮತ್ತು ಟ್ರಕ್‍ಗಳನ್ನು ಓಡಿಸುವ ಯೋಜನೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ
6ನೇ ರಾಷ್ಟ್ರೀಯ ಹಣಕಾಸು ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರಗಳ ಕೊಳಚೆ ನೀರು ಮತ್ತು ಘನ ತ್ಯಾಜ್ಯದಿಂದ ಉತ್ಪಾದಿಸಬಹುದಾದ ಗ್ರೀನ್ ಹೈಡ್ರೋಜನ್ ಬಳಸಿ ಬಸ್, ಕಾರು ಮತ್ತು ಟ್ರಕ್‍ಗಳನ್ನು ಓಡಿಸುವ ಯೋಜನೆ ಇದೆ ಎಂದು ಹೇಳಿದ್ದಾರೆ. ಕಸಕ್ಕೆ ಮೌಲ್ಯ ತಂದುಕೊಡಲು ನಾನು ಪ್ರಯತ್ನಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ನಾನು ಫರಿದಾಬಾದ್‍ನ ತೈಲ ಸಂಶೋಧನಾ ಸಂಸ್ಥೆಯಲ್ಲಿ ಉತ್ಪಾದಿಸುವ ಹಸಿರು ಹೈಡ್ರೋಜನ್‍ನಿಂದ ಚಲಿಸುವ ಪೈಲಟ್ ಪ್ರಾಜೆಕ್ಟ್ ಕಾರನ್ನು ಖರೀದಿಸಿದ್ದೇನೆ. ಈ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಲು ನಗರದಲ್ಲಿ ಓಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ನನ್ನ ಹುಟ್ಟಿಸಿದ್ಯಾಕೆ?- ತಾಯಿಯ ಹೆರಿಗೆ ಮಾಡಿಸಿದ್ದ ವೈದ್ಯರ ವಿರುದ್ಧ ಯುವತಿ ಕೇಸ್