ಟೋಲ್ ಆದಾಯ ಮುಂದಿನ 3 ವರ್ಷಗಳಲ್ಲಿ 1.40 ಲಕ್ಷ ಕೋಟಿ ರೂ.ಗೆ ಏರಿಕೆ

Advertisements

ನವದೆಹಲಿ: ಎನ್‌ಎಚ್‌ಎಐನ ಟೋಲ್ ವಾರ್ಷಿಕ ಆದಾಯವು ಮುಂದಿನ ಮೂರು ವರ್ಷಗಳಲ್ಲಿ 40,000 ಕೋಟಿ ರೂ.ಗಳಿಂದ 1.40 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದರು.

Advertisements

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಮೂಲಸೌಕರ್ಯ ಕ್ಷೇತ್ರದಲ್ಲಿ ಹೂಡಿಕೆದಾರರಿಗೆ ಅತಿ ಹೆಚ್ಚು ಅವಕಾಶವಿದೆ. ಏಕೆಂದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಸಂಚಾರವೂ ಹೆಚ್ಚುತ್ತಿದೆ. ಹೂಡಿಕೆದಾರರು ಇಲ್ಲಿ ಹೂಡಿಕೆ ಮಾಡುವುದರಿಂದ ಭಾರತದ ಆರ್ಥಿಕತೆಗೂ ಸಹಾಯವಾಗುತ್ತದೆ ಎಂದು ಹೇಳಿದರು.

Advertisements

ಪ್ರಸ್ತುತ ಟೋಲ್ ಆದಾಯ 40,000 ಕೋಟಿ ರೂ.ಗಳಾಗಿದೆ. ಇದು ಮುಂದಿನ ಮೂರು ವರ್ಷಗಳಲ್ಲಿ 1.40 ಲಕ್ಷ ಕೋಟಿ ರೂ.ಗೆ ಏರಲಿದೆ ಎಂದ ಅವರು ಮೂಲಸೌಕರ್ಯ ವಲಯದಲ್ಲಿ ಹೂಡಿಕೆಗಳನ್ನು ಆಹ್ವಾನಿಸಿದರು. ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಮೂರು ತಿಂಗಳೊಳಗೆ ಸಮನ್ವಯ ಸಮಿತಿಗಳು ನಿರ್ಧರಿಸಬೇಕು ಎಂದು ಸಚಿವರು ಸೂಚಿಸಿದರು. ಇದನ್ನೂ ಓದಿ: LPG ಗ್ಯಾಸ್, ಟಾಯ್ಲೆಟ್‌ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ

ಎಲ್ಲಾ ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮೂರು ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಈ ಪೀಠದಲ್ಲಿ ನ್ಯಾಯಾಂಗ, ಹಣಕಾಸು, ಸಾರ್ವಜನಿಕ ಆಡಳಿತ ಹಾಗೂ ಖಾಸಗಿ ವಲಯಗಳನ್ನು ಒಳಗೊಂಡ ತಜ್ಞರ ತಂಡ ಇರುತ್ತದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ವಿಶ್ವಕಪ್ ಗೆಲ್ಲುವ ಕಥೆಯಾಧಾರಿತ 83 ಸಿನಿಮಾಗೆ ಟ್ಯಾಕ್ಸ್ ಇಲ್ಲ!

Advertisements

Advertisements
Exit mobile version