ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ರೋಗ ಲಕ್ಷಣಗಳನ್ನು ಹೊಂದಿರುವುದಾಗಿ ಅವರು ಎಂದು ತಿಳಿಸಿದ್ದಾರೆ.
ಸದ್ಯ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೋಮ್ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಗಡ್ಕರಿ ಅವರು ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಆಗಿ ಅಲ್ಲಿ ಇರುವುದರ ಜೊತೆಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Advertisement
ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಎಲ್ಲಾ ರೀತಿಯ ಮುನ್ನೆಚ್ಚರಿಕೆಯನ್ನು ಪಡೆದುಕೊಂಡು ನಾನು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್
Advertisement
Advertisement
ಹಿಂದಿನ ವರ್ಷ ಸಪ್ಟೆಂಬರ್ ತಿಂಗಳಿನಲ್ಲಿ ಅವರಿಗೆ ಮೊದಲ ಬಾರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಹಾರ ಸಿಎಂ ನಿತಿಶ್ ಕುಮಾರ್ ಹಾಗೂ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದನ್ನೂ ಓದಿ: BJP ರಾಜ್ಯಾಧ್ಯಕ್ಷ, ರಾಷ್ಟ್ರಾಧ್ಯಕ್ಷರಿಗೆ ಕೊರೊನಾ ಪಾಸಿಟಿವ್