ಬೆಂಗಳೂರು: ಬಿಜೆಪಿ (BJP)-ಜೆಡಿಎಸ್ (JDS) ಮಧ್ಯೆ ಟ್ವಿಟ್ಟರ್ ವಾರ್ ಮುಂದುವರಿದಿದೆ. 40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ (Nitin Gadkari) ಸರಣಿ ಟ್ವೀಟ್ ಮೂಲಕ ಜೆಡಿಎಸ್ ಪ್ರಶ್ನೆಗಳ ಸುರಿಮಳೆ ಗೈದು ಬಿಜೆಪಿ ವಿರುದ್ಧ ಕಿಡಿಕಾರಿದೆ.
Advertisement
ಟ್ವೀಟ್‍ನಲ್ಲಿ ಏನಿದೆ?
40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ಗಡ್ಕರಿ ಅವರಿಗೆ ಸ್ವಾಗತ. ಪ್ರಧಾನಿ ಬಂದಾಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಕಿತ್ತು ಹೋದ ಸಂಗತಿ ರಾಜ್ಯದ ಜನತೆಗೆ ಗೊತ್ತಿದೆ. ಇಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ, ಅದೇ ಪಕ್ಷದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಯ ಕೇಂದ್ರ ಸಚಿವರಾಗಿರುವ ತಾವು ಯಾವ ಸಲಹೆ ಕೊಡಲು ಬಯಸುತ್ತೀರಿ? ಇದನ್ನೂ ಓದಿ: ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ – 10.50 ಲಕ್ಷ ಪೊಲೀಸರ ವಶಕ್ಕೆ
Advertisement
Advertisement
ಬೆಂಗಳೂರು-ಮೈಸೂರು ದಶಪಥ ಮುಖ್ಯ ಹೆದ್ದಾರಿಯು ಮಳೆಯ ಕಾರಣದಿಂದ ಜಲಾವೃತಗೊಂಡಾಗ ಜನರ ಸಂಕಷ್ಟ ಆಲಿಸಲು ಬಾರದ ಕೇಂದ್ರ ಸಚಿವರೇ, ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ? ಈಗ ಅದೇ ರಸ್ತೆ ಕಾಮಗಾರಿಯ ವೈಮಾನಿಕ ಸಮೀಕ್ಷೆ ಮಾಡಲು ಬಂದಿರುವ ತಮಗೆ ಅಲ್ಲಿನ ಅಸಮರ್ಪಕತೆ ವಿಷಯಗಳು ತಿಳಿದಿಲ್ಲವೆ? ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಿಸಿಟಿವಿಗಳು ಯಾಕೆ ಅಳವಡಿಕೆಯಾಗಿಲ್ಲ?
Advertisement
ಇವೇ ಕಾರಣಗಳಿಂದ ಸಂಭವಿಸಿರುವ ಹತ್ತಾರು ಅಪಘಾತಗಳಿಗೆ ಯಾರು ಜವಾಬ್ದಾರರು? ಅಪಘಾತ ತಡೆ ಸಂಬಂಧ ಪೆಟ್ರೋಲಿಂಗ್ ಯಾಕೆ ಇನ್ನೂ ಆರಂಭವಾಗಿಲ್ಲ? ಸರ್ವೀಸ್ ರಸ್ತೆಯಲ್ಲಿ ವೇಗ ಮಿತಿಗಾಗಿ ವೈಜ್ಞಾನಿಕವಾಗಿ ಹಂಪ್‍ಗಳನ್ನು ನಿರ್ಮಿಸಿಲ್ಲ? ಇದೇ ದಶಪಥ ರಸ್ತೆಯ ಭೂಸ್ವಾಧೀನ ಪ್ರಕ್ರಿಯೆಗೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ (H.D Kumaraswamy) ಅವರು ಮಾಡಿದ ಸಭೆಗಳು, ನೀಡಿದ ನೆರವು ಮರೆತುಬಿಟ್ರಾ? ಇದನ್ನೂ ಓದಿ: ಸಿದ್ದು ನಾಯಿಮರಿ ಹೇಳಿಕೆ: ಸಿಎಂ ಸಾಫ್ಟ್ ನಡೆ – ಒಗ್ಗಟ್ಟಿಂದ ಮುಗಿಬಿದ್ದ ಬಿಜೆಪಿ ಟೀಮ್
40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ @nitin_gadkari ಅವರಿಗೆ ಸ್ವಾಗತ!
1/7
— Janata Dal Secular (@JanataDal_S) January 5, 2023
ಇದೆಲ್ಲ ಹೋಗಲಿ, ನೀವು ಮಾಡಿರುವ ಕೆಲಸವಾದರೂ ನೆಟ್ಟಗಿದೆಯಾ? ಬಿಜೆಪಿ ಆಡಳಿತ ಬಂದ ನಂತರ ಈ ಯೋಜನೆಗೆ ಅವೈಜ್ಞಾನಿಕವಾಗಿ ಭೂಸ್ವಾಧೀನ ಪಡಿಸಿಕೊಂಡು ಲೂಟಿ ಹೊಡೆದ ವಿಷಯಗಳು ತಮಗೆ ತಿಳಿದಿಲ್ಲವೇ, ಗಡ್ಕರಿ ಅವರೇ? ಅಥವಾ 40% ಕಮಿಷನ್ ಹೊಡೆಯುವ ದಂಧೆಯಲ್ಲಿ ನಿರತರಾಗಿರುವ ನಿಮ್ಮದೇ ರಾಜ್ಯ ಸರ್ಕಾರದಿಂದ ತಮಗೂ ಏನಾದರೂ ಪಾಲು ಸಿಕ್ಕಿದೆಯಾ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದೆ.
ಈ ರಸ್ತೆಯ ಕಾಮಗಾರಿಗೆ ಸಂಬಂಧಿಸಿದ ಮಹತ್ವದ ಕಾರ್ಯಗಳಿಗೆ ಅನುಕೂಲವಾಗುವ ಹಲವು ನಿರ್ಧಾಗಳನ್ನು ತೆಗೆದುಕೊಂಡಿದ್ದು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು. ವೈಮಾನಿನ ಸಮೀಕ್ಷೆಗೆ ಬಂದಿರುವ ಗಡ್ಕರಿ ಅವರೇ, ಈ ರಸ್ತೆ ಕಾಮಗಾರಿಯಲ್ಲಿ ನಡೆದ ಅಕ್ರಮದ ಬಗ್ಗೆ ತುಟಿ ಬಿಚ್ಚುತ್ತೀರೋ ಎಂದು ಪ್ರಶ್ನಿಸಿ ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k