Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ.20ಕ್ಕೆ ಬಿಜೆಪಿಯ ಪೂರ್ಣ ಪ್ರಮಾಣದ ಅಧ್ಯಕ್ಷರಾಗಿ ನಬಿನ್ ಅಧಿಕಾರ ಸ್ವೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜ.20ಕ್ಕೆ ಬಿಜೆಪಿಯ ಪೂರ್ಣ ಪ್ರಮಾಣದ ಅಧ್ಯಕ್ಷರಾಗಿ ನಬಿನ್ ಅಧಿಕಾರ ಸ್ವೀಕಾರ

Districts

ಜ.20ಕ್ಕೆ ಬಿಜೆಪಿಯ ಪೂರ್ಣ ಪ್ರಮಾಣದ ಅಧ್ಯಕ್ಷರಾಗಿ ನಬಿನ್ ಅಧಿಕಾರ ಸ್ವೀಕಾರ

Public TV
Last updated: January 13, 2026 9:00 am
Public TV
Share
3 Min Read
Nitin Nabin
SHARE

ನವದೆಹಲಿ: ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಜನವರಿ 20 ರಂದು ಪಕ್ಷದ ಪೂರ್ಣ ಪ್ರಮಾಣದ ರಾಷ್ಟ್ರೀಯ ಅಧ್ಯಕ್ಷರಾಗಿ (National President) ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಪ್ರಧಾನಿ ಮೋದಿ, ಮುಖ್ಯಮಂತ್ರಿಗಳು, ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯಾಧ್ಯಕ್ಷರು ಮತ್ತು ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸದಸ್ಯರು ಸೇರಿದಂತೆ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಅಧ್ಯಕ್ಷರ ಚುನಾವಣೆಗೆ ನಾಮನಿರ್ದೇಶನಗಳು ಜನವರಿ 19 ರಂದು ನಡೆಯಲಿದ್ದು, ಮರುದಿನ ಚುನಾವಣೆ ನಡೆಯಲಿದೆ ಎಂದು ಪಕ್ಷದ ಮೂಲಗಳು ಸೂಚಿಸಿವೆ. ಡಿಸೆಂಬರ್ 15 ರಂದು ನಬಿನ್‌ ಅವರನ್ನು ಬಿಜೆಪಿ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಿತ್ತು. 45 ವರ್ಷದ ನಬಿನ್‌ ಬಿಹಾರದ ಪಾಟ್ನಾ ಜಿಲ್ಲೆಯ ಬಂಕಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಭವಿಷ್ಯದಲ್ಲಿ ಯುವ ನಾಯಕರಿಗೆ ಮಹತ್ವದ ಜವಾಬ್ದಾರಿ ನೀಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿ ಈ ಹುದ್ದೆಯನ್ನು ನೀಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ. ಬಿಜೆಪಿಯೊಳಗೆ ನಬಿನ್ ಜೊತೆ ನಿಕಟವಾಗಿ ಕೆಲಸ ಮಾಡಿದವರು ಅವರನ್ನು ಕಠಿಣ ಪರಿಶ್ರಮಿ, ರಾಜಕೀಯವಾಗಿ ಕುತೂಹಲಿ ಎಂದು ಬಣ್ಣಿಸಿದ್ದಾರೆ.

ನಬಿನ್‌ ಅವರ ತಂದೆ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಜನಸಂಘದ ಮಾಜಿ ಸದಸ್ಯ, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 2 ದಶಕಗಳ ರಾಜಕೀಯ ಅನುಭವ ಹೊಂದಿರುವ ನಬಿನ್‌ ಐದು ಬಾರಿ ಬಂಕಿಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಮತ್ತು ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದಾರೆ. ಬಿಹಾರ ಮತ್ತು ಪೂರ್ವ ಭಾರತದಿಂದ ಆಯ್ಕೆಯಾದ ಮೊದಲ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಇವರಾಗಿದ್ದಾರೆ.

 

Nitin Nabin

ಛತ್ತೀಸ್‌ಗಢದ ಉಸ್ತುವಾರಿಯಾಗಿದ್ದ ನಬಿನ್‌ ಅಲ್ಲಿ ಪಕ್ಷವನ್ನು ಆಡಳಿತಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇವರ ಕೆಲಸವನ್ನು ಗುರುತಿಸಿದ ಬಳಿಕ ಇವರಿಗೆ ದೆಹಲಿ ಚುನಾವಣೆಯ ಪ್ರಚಾರದಲ್ಲಿ ಪ್ರಮುಖ ಪಾತ್ರ ನೀಡಲಾಗಿತ್ತು.

ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ಇವರು ಎಂದಿಗೂ ಪಕ್ಷ ಹಾಕಿದ ಗೆರೆಯನ್ನು ದಾಟುವುದಿಲ್ಲ ಎಂಬ ಅಭಿಪ್ರಾಯ ಪಕ್ಷದಲ್ಲಿದೆ. ಉತ್ತಮ ಸಂವಹನ ಕಲೆಯ ಜೊತೆ ಸಂಘಟನಾ ಚಾತುರ್ಯ ಇವರಿಗಿದೆ. ಕೊಟ್ಟ ಜವಾಬ್ದಾರಿಯನ್ನು ಯಶಸ್ವಿಯಾಗಿ ಮುಗಿಸಿ ಉತ್ತಮ ಫಲಿತಾಂಶ ತಂದುಕೊಟ್ಟುವ ಹೆಗ್ಗಳಿಕೆಯಿದೆ. ಎಲ್ಲರನ್ನು ಅದರಲ್ಲೂ ಮುಖ್ಯವಾಗಿ ಪಕ್ಷದ ಹಿರಿಯರನ್ನು ಜೊತೆಯಾಗಿ ನಬಿನ್‌ ಕರೆದುಕೊಂಡು ಹೋಗುತ್ತಾರೆ ಎಂಬ ಭಾವನೆ ಪಕ್ಷದೊಳಗಿದೆ. ಇದನ್ನೂ ಓದಿ: 1947ರ ಬಳಿಕ ಫಸ್ಟ್‌ ಟೈಮ್‌ – ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್‌

ನಿತಿನ್ ನಬಿನ್ ಬಿಹಾರದ ಕಾಯಸ್ಥ ಸಮುದಾಯದಿಂದ ಬಂದಿದ್ದಾರೆ. ಬಿಹಾರದಲ್ಲಿ (Bihar) ಕಾಯಸ್ಥ ಮೇಲ್ವರ್ಗದ ಜಾತಿ ಎಂದು ಪರಿಗಣಿಸಿದರೂ ಇತರ ಜಾತಿಗಳ ಜೊತೆ ಸಂಘರ್ಷದಲ್ಲಿ ಇಲ್ಲ. ಬಿಹಾರ ಚುನಾವಣಾ ಸಮಯದಲ್ಲಿ ಗೃಹ ಸಚಿವ ಅಮಿತ್‌ ಶಾ ನಿತಿನ್ ಮನೆಗೆ ಭೇಟಿ ನೀಡಿ ಅವರ ಸಂಘಟನಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಹಾರ ಚುನಾವಣೆಗೆ ಮೊದಲು ಜೀವಿಕಾ ದೀದಿ ಜಾಲವನ್ನು ಸಜ್ಜುಗೊಳಿಸುವ ಜವಾಬ್ದಾರಿಯನ್ನು ನಬಿನ್ ಅವರಿಗೆ ವಹಿಸಲಾಗಿತ್ತು. ಬಿಹಾರ ಮೈತ್ರಿಕೂಟ ಒಗ್ಗಟ್ಟನ್ನು ಪ್ರದರ್ಶಿಸುವ ಪ್ರಮುಖ ಎನ್‌ಎಡಿಎಎ ಸಮನ್ವಯ ಸಭೆಗಳಲ್ಲಿಯೂ ಇವರು ಭಾಗಿಯಾಗುತ್ತಿದ್ದರು.

ಛತ್ತೀಸ್‌ಗಢ ಪ್ರಚಾರದ ಸಮಯದಲ್ಲಿ ನಬಿನ್ ಅವರ ಸಂಘಟನಾ ಕೌಶಲ್ಯ ಹೈಕಮಾಂಡ್‌ ಗಮನಕ್ಕೆ ಬಂದಿತ್ತು. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಚುನಾವಣಾ ಸಹ-ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಚುನಾವಣೆಗೆ ಕನಿಷ್ಠ ಒಂದೂವರೆ ವರ್ಷಕ್ಕೆ ಮೊದಲು ನಬಿನ್ ವಾರದಲ್ಲಿ ಕನಿಷ್ಠ ನಾಲ್ಕು ದಿನ ಛತ್ತೀಸ್‌ಗಢಗೆ ಬರುತ್ತಿದ್ದರು. ಇದು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ವಿರುದ್ಧ ಬಿಜೆಪಿಯ ಪ್ರಚಾರಕ್ಕೆ ಭದ್ರವಾದ ಅಡಿಪಾಯ ಹಾಕಿತ್ತು.

ತಾನು ಕಾರ್ಯಾಧ್ಯಕ್ಷನಾಗುತ್ತೇನೆ ಎನ್ನುವುದು ಸ್ವತ: ನಿತಿನ್ ನಬಿನ್ ಅವರಿಗೆ ತಿಳಿದಿರಲಿಲ್ಲ. ಬಿಹಾರದಲ್ಲಿ ಪಕ್ಷ ಅಧಿಕಾರಕ್ಕೆ ಏರಲು ಕಾರಣರಾದ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ನಿತಿನ್‌ ಡಿ.14 ರಂದು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಇರುವಾಗಲೇ ನಿತಿನ್ ನಬಿನ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ಘೋಷಿಸಿತ್ತು.

TAGGED:BiharbjpdelhiNitin Nabinದೆಹಲಿನಿತಿನ್ ನಬಿನ್ಬಿಜೆಪಿಬಿಹಾರ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Narendra Modi
Crime

ಹಣಕ್ಕಾಗಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಶತ್ರುಗಳಿಗೆ ರವಾನೆ – ಆರೋಪಿ ಅರೆಸ್ಟ್‌

Public TV
By Public TV
3 minutes ago
Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
7 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
8 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
8 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
9 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?