ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜನತಾ ದಳದ (JDU) ಮುಖ್ಯಸ್ಥನ ಸ್ಥಾನದಿಂದ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್ (Laln Singh) ಅವರನ್ನು ತೆಗೆದುಹಾಕುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ನಿತೀಶ್ ಕುಮಾರ್ ಅವರೇ ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಈ ಕುರಿತು ಡಿಸೆಂಬರ್ 29ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
Advertisement
Advertisement
ಲಾಲನ್ ಸಿಂಗ್ ಅವರು ಕಾರ್ಯನಿರ್ವಹಿಸುತ್ತಿರುವ ರೀತಿ ಮತ್ತು ವಿಶೇಷವಾಗಿ ಆರ್‍ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejaswi Yadav) ಅವರೊಂದಿಗಿನ ಸಾಮೀಪ್ಯದಿಂದ ನಿತೀಶ್ ಕುಮಾರ್ (Nitish Kumar) ಅಸಮಾಧಾನಗೊಂಡಿದ್ದಾರೆ. ಅಲ್ಲದೆ ತಮ್ಮ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ಇಂಡಿಯಾ ಒಕ್ಕೂಟದೊಂದಿಗೆ (I.N.D.I.A) ಉತ್ತಮವಾಗಿ ಸಹಕರಿಸುವಲ್ಲಿಯೂ ಲಾಲನ್ ಸಿಂಗ್ ವಿಫಲರಾಗಿದ್ದಾರೆ ಎಂದು ನಿತೀಶ್ ಅಸಮಾಧಾನಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
Advertisement
Advertisement
ಒಂದು ವೇಳೆ ಪಕ್ಷದ ಮುಖ್ಯಸ್ಥನ ಸ್ಥಾನದಿಂದ ತೆಗೆದುಹಾಕಲ್ಪಟ್ಟರೆ, ಲಾಲನ್ ಸಿಂಗ್ ಅವರು ನಿತೀಶ್ ಕುಮಾರ್ ಅವರಿಗೆ ಅತ್ಯಂತ ನಿಕಟವಾಗಿದ್ದರೂ, ಜಾರ್ಜ್ ಫರ್ನಾಂಡಿಸ್, ಶರದ್ ಯಾದವ್, ಆರ್ ಸಿಪಿ ಸಿಂಗ್, ಉಪೇಂದ್ರ ಕುಶ್ವಾಹ ಮತ್ತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರಂತಹ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಸೇರುತ್ತಾರೆ ಎನ್ನಲಾಗಿದೆ.
2024 ರ ಲೋಕಸಭೆ ಚುನಾವಣೆಯಲ್ಲಿ ಮುಂಗರ್ ಕ್ಷೇತ್ರದಿಂದ (Munger Constituency) ಮತ್ತೊಮ್ಮೆ ಸ್ಪರ್ಧಿಸಲು ಲಾಲನ್ ಸಿಂಗ್ ಉತ್ಸುಕರಾಗಿದ್ದಾರೆ. ಇವರು ಆರ್‌ಜೆಡಿ ಪಕ್ಷದಿಂದ ಟಿಕೆಟ್‌ನಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂಬುದಾಗಿ ವರದಿಯಾಗಿದೆ.