ನವದೆಹಲಿ: ಲೋಕಸಭಾ ಚುನಾವಣೆಗೆ (Loksabha Election) ತಿಂಗಳುಗಳು ಬಾಕಿ ಇರುವಾಗಲೇ ಜನತಾ ದಳ (ಯುನೈಟೆಡ್) ಅಧ್ಯಕ್ಷ ಸ್ಥಾನಕ್ಕೆ ರಾಜೀವ್ ರಂಜನ್ ಅಕಾ ಲಲನ್ ಸಿಂಗ್ ರಾಜೀನಾಮೆ ನೀಡಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಇದೀಗ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಜೆಡಿಯು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಕೆ.ಸಿ ತ್ಯಾಗಿ ತಿಳಿಸಿದ್ದಾರೆ. ಈ ಮೂಲಕ ಲಲನ್ ಸಿಂಗ್ (Lalan Singh) ಅವರು ಹುದ್ದೆಯಿಂದ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ನಿತೀಶ್ ಅವರನ್ನು ಪಕ್ಷದ ಉನ್ನತ ಹುದ್ದೆಗೆ ನೇಮಿಸಲಾಯಿತು.
Advertisement
Advertisement
ಲಲನ್ ಸಿಂಗ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಮುಂಬರುವ ಚುನಾವಣೆಗಳಲ್ಲಿ ಹೆಚ್ಚು ಗಮನಹರಿಸಲು ಮತ್ತು ಸಕ್ರಿಯವಾಗಿ ಭಾಗವಹಿಸಲು ಬಯಸುವುದು ರಾಜೀನಾಮೆಗೆ ಕಾರಣ ಎಂದು ಉಲ್ಲೇಖಿಸಿದ್ದರು. ನಂತರ ಅವರು ನಿತೀಶ್ ಕುಮಾರ್ ಅವರನ್ನು ಪಕ್ಷದ ಉನ್ನತ ಪಾತ್ರಕ್ಕೆ ತಮ್ಮ ಉತ್ತರಾಧಿಕಾರಿಯಾಗಿ ಪ್ರಸ್ತಾಪಿಸಿದರು.
Advertisement
ಮಾಹಿತಿ ಪ್ರಕಾರ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯೇ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಅಧ್ಯಕ್ಷರಾಗಿ ಲಲನ್ ಸಿಂಗ್ ಅವರ ಎರಡು ವರ್ಷಗಳ ಅವಧಿಯೂ ಪೂರ್ಣಗೊಂಡಿದೆ. ಇದೀಗ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಪಕ್ಷದ ರಾಷ್ಟ್ರೀಯ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ಅನುಮೋದಿಸಲಾಗಿದೆ.
Advertisement
ಒಟ್ಟಿನಲ್ಲಿ ಕಳೆದ ಒಂದು ವಾರದಿಂದ ಜೆಡಿಯುನಲ್ಲಿ ಅಧ್ಯಕ್ಷರ ರಾಜೀನಾಮೆ ಸುದ್ದಿ ಭಾರೀ ಹರಿದಾಡುತ್ತಿದ್ದು, ಇಂದು ಎಲ್ಲದಕ್ಕೂ ತೆರೆಬಿದ್ದಿದೆ.