ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ಯುವ ಮುಖಂಡನನ್ನು ಗುಂಡು ಹಾರಿಸಿ ಹತ್ಯೆಗೈದ ಘಟನೆ ಪಾಟ್ನಾದಲ್ಲಿ ನಡೆದಿದೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟ ಜೆಡಿಯು ನಾಯಕನನ್ನು ಸೌರಭ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಬೈಕ್‍ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಈ ವೇಳೆ ಸೌರಭ್ ಅವರ ತಲೆಗೆ ಎರಡು ಗುಂಡುಗಳು ತಗಲಿವೆ. ದಾಳಿಯಲ್ಲಿ ಅವರ ಜೊತೆಗಿದ್ದ ಮುನ್ಮುನ್ ಎಂಬವರಿಗೂ ಮೂರು ಗುಂಡುಗಳು ತಗುಲಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ
ದುಷ್ಕರ್ಮಿಗಳು ಸೌರಭ್ ಅವರ ಮೇಲೆ ಗುಂಡು ಹಾರಿಸಿದ ಬಳಿಕ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮತ್ತೋರ್ವ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಹತ್ಯೆ ಖಂಡಿಸಿ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಮಾಹಿತಿ ಮೇರೆಗೆ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಸಂತ್ರಸ್ತ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಘಟನೆ ಬಳಿಕ ಪಾಟ್ನಾ ಪೆÇಲೀಸರ ವಿಶೇಷ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದೆ. ಇದನ್ನೂ ಓದಿ: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಲು ಈ ಮುನ್ನೆಚ್ಚರಿಕೆಗಳಿರಲಿ