ಪಾಟ್ನಾ: ಬಿಹಾರದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿದ ನಿತೀಶ್ ಕುಮಾರ್ ಅವರು ತಮ್ಮದೇ ದಾಖಲೆಯನ್ನು ಮುರಿದು ಬುಧವಾರ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಆರ್‌ಜೆಡಿ ನಾಯಕ, ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರು 7 ವರ್ಷಗಳ ಹಿಂದೆ ತೊರೆದಿದ್ದ ಸ್ಥಾನವನ್ನು ಮರಳಿ ಪಡೆದಿದ್ದು, ಈ ಮೂಲಕ ಬಿಹಾರದ ಉಪ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Advertisement
Advertisement
7 ವರ್ಷಗಳ ಹಿಂದೆ ತೇಜಸ್ವಿ ಯಾದವ್ ಮೇಲೆ ಭ್ರಷ್ಟಾಚಾರದ ಆರೋಪ ಬಂದ ಹಿನ್ನೆಲೆಯಲ್ಲಿ ಸರ್ಕಾರ ಪತನಗೊಂಡಿತ್ತು. ಈಗ ಮತ್ತೆ ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ಜೋಡಿಯಾಗಿ 7 ರ್ಷಗಳ ಬಳಿಕ ಸಿಎಂ ಹಾಗೂ ಉಪ ಮುಖ್ಯಮಂತ್ರಿಯಾಗಿ ಮರಳಿದ್ದಾರೆ. ಇದನ್ನೂ ಓದಿ: ಭಾರತದ ಪ್ರತಿ ಇಂಚು ಜಾಗವೂ ಹಿಂದೂಗಳದ್ದೇ: ರೇಣುಕಾಚಾರ್ಯ
Advertisement
Advertisement
ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆಗಿನ ಸಂಬಂಧವನ್ನು ಮುರಿದುಕೊಂಡು, ಆರ್‌ಜೆಡಿ ಪಕ್ಷದೊಂದಿಗೆ ಕೈಜೋಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರದಲ್ಲಿ ಮಹಾರಾಷ್ಟ್ರದ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಆರೋಪಿಸಿದ್ದಾರೆ. ಇದನ್ನೂ ಓದಿ: RSS ಕಚೇರಿಗೆ ತೆರಳಿ ರಾಷ್ಟ್ರಧ್ವಜ ನೀಡಿದ ಕಾಂಗ್ರೆಸ್ ಯುವ ಕಾರ್ಯಕರ್ತರು