LatestMain PostNational

8ನೇ ಬಾರಿ ಬಿಹಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

ಪಾಟ್ನಾ: ಬಿಹಾರದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿದ ನಿತೀಶ್ ಕುಮಾರ್ ಅವರು ತಮ್ಮದೇ ದಾಖಲೆಯನ್ನು ಮುರಿದು ಬುಧವಾರ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆರ್‌ಜೆಡಿ ನಾಯಕ, ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರು 7 ವರ್ಷಗಳ ಹಿಂದೆ ತೊರೆದಿದ್ದ ಸ್ಥಾನವನ್ನು ಮರಳಿ ಪಡೆದಿದ್ದು, ಈ ಮೂಲಕ ಬಿಹಾರದ ಉಪ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

7 ವರ್ಷಗಳ ಹಿಂದೆ ತೇಜಸ್ವಿ ಯಾದವ್ ಮೇಲೆ ಭ್ರಷ್ಟಾಚಾರದ ಆರೋಪ ಬಂದ ಹಿನ್ನೆಲೆಯಲ್ಲಿ ಸರ್ಕಾರ ಪತನಗೊಂಡಿತ್ತು. ಈಗ ಮತ್ತೆ ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ಜೋಡಿಯಾಗಿ 7 ರ್ಷಗಳ ಬಳಿಕ ಸಿಎಂ ಹಾಗೂ ಉಪ ಮುಖ್ಯಮಂತ್ರಿಯಾಗಿ ಮರಳಿದ್ದಾರೆ. ಇದನ್ನೂ ಓದಿ: ಭಾರತದ ಪ್ರತಿ ಇಂಚು ಜಾಗವೂ ಹಿಂದೂಗಳದ್ದೇ: ರೇಣುಕಾಚಾರ್ಯ

ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆಗಿನ ಸಂಬಂಧವನ್ನು ಮುರಿದುಕೊಂಡು, ಆರ್‌ಜೆಡಿ ಪಕ್ಷದೊಂದಿಗೆ ಕೈಜೋಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರದಲ್ಲಿ ಮಹಾರಾಷ್ಟ್ರದ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಆರೋಪಿಸಿದ್ದಾರೆ. ಇದನ್ನೂ ಓದಿ:  RSS ಕಚೇರಿಗೆ ತೆರಳಿ ರಾಷ್ಟ್ರಧ್ವಜ ನೀಡಿದ ಕಾಂಗ್ರೆಸ್ ಯುವ ಕಾರ್ಯಕರ್ತರು

Live Tv

Leave a Reply

Your email address will not be published.

Back to top button