– ಮತ್ತೆ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ
ಪಾಟ್ನ: ನಿತೀಶ್ ಕುಮಾರ್ (Nitish Kumar) ಅವರು 9 ಬಾರಿಗೆ ಬಿಹಾರ (Bihar) ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ತಮ್ಮ ಪಕ್ಷದೊಂದಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಿ ಸರ್ಕಾರ ರಚಿಸಿದ್ದಾರೆ.
Advertisement
ಬಿಹಾರದ ರಾಜಭವನದಲ್ಲಿ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಬಿಹಾರದ ಸಂಪುಟ ದರ್ಜೆಯ ಸಚಿವರಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಇಂದು ಸಂಜೆ 5 ಕ್ಕೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ – BJPಯ ಇಬ್ಬರು ಡಿಸಿಎಂ
Advertisement
Advertisement
ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ದಾಖಲೆಯ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಒಟ್ಟು 8 ನಾಯಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Advertisement
ಬಿಜೆಪಿಯಿಂದ ಮೂವರು: ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ, ಪ್ರೇಮ್ ಕುಮಾರ್. ಜೆಡಿಯುನಿಂದ ಮೂವರು: ವಿಜಯ್ ಕುಮಾರ್ ಚೌಧರಿ, ಬಿಜೇಂದ್ರ ಪ್ರಸಾದ್ ಯಾದವ್, ಶ್ರವೋನ್ ಕುಮಾರ್ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಅಧ್ಯಕ್ಷ ಸಂತೋಷ್ ಕುಮಾರ್ ಸುಮನ್ ಮತ್ತು ಪಕ್ಷೇತರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಕಸ ಮತ್ತೆ ಡಸ್ಟ್‌ಬಿನ್‌ಗೆ ಹೋಗಿದೆ – ಪಕ್ಷ ತೊರೆದ ನಿತೀಶ್ ಕುಮಾರ್‌ಗೆ ಲಾಲೂ ಪುತ್ರಿ ಟಾಂಗ್