ಪಾಟ್ನಾ: ಸಚಿವ ಸಂಪುಟ ಸಭೆಯ ಬಳಿಕ ನಿತೀಶ್ ಕುಮಾರ್ (Nitish Kumar) ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೇ ನ.20ರಂದು 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು (ನ.17) ನಡೆದ ಕೊನೆಯ ಸಚಿವ ಸಂಪುಟ ಸಭೆಯ ಬಳಿಕ ಸಿಎಂ ನಿತೀಶ್ ಕುಮಾರ್ ಅವರು ರಾಜಭವನದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammad Khan) ಅವರಿಗೆ ರಾಜೀನಾಮೆ ಸಲ್ಲಿಸಿದರು. ಇದೇ ಗುರುವಾರ (ನ.20) ಗಾಂಧಿ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದನ್ನೂ ಓದಿ: ಬಿಹಾರ ವಿಧಾನಸಭೆಯ ವಿಪಕ್ಷ ನಾಯಕನಾಗಿ ತೇಜಸ್ವಿ ಯಾದವ್ ಆಯ್ಕೆ
ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್‌ಡಿಎ ನಾಲ್ಕನೇ ಮೂರು ಭಾಗದಷ್ಟು ಬಹುಮತವನ್ನು ಗಳಿಸಿತ್ತು. ಬಿಜೆಪಿ ಗರಿಷ್ಠ 89 ಸ್ಥಾನಗಳನ್ನು ಗೆದ್ದಿದೆ, ನಂತರ ಜೆಡಿಯು 85 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್, ಆರ್‌ಜೆಡಿ ಮತ್ತು ಇತರ ಪಕ್ಷಗಳ ಒಕ್ಕೂಟವಾದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರಗಳಿಸಿದೆ.
ಇದೀಗ ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿದೆ. ಇನ್ನು ಬಿಹಾರ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎಗೆ ಭರ್ಜರಿ ಗೆಲುವು ಸಿಕ್ಕಿದ ಬೆನ್ನಲ್ಲೇ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ನಾಯಕರು, ಪ್ರಧಾನಿ ಮೋದಿ ಒಂದು ಮತಕ್ಕೆ ಮಹಿಳೆಯರಿಗೆ 10 ಸಾವಿರ ರೂಪಾಯಿಗಳನ್ನು ನೀಡಿದ್ದಾರೆಂದು ಆರೋಪಿಸಿದ್ದಾರೆ.ಇದನ್ನೂ ಓದಿ: ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್ ವಾದ್ರಾ

