ಪಾಟ್ನಾ: ಬಿಹಾರದಲ್ಲಿ ಮತ್ತೆ ಮಹಾಮೈತ್ರಿ ಶುರುವಾಗಿದೆ. ಬುಧವಾರದಂದು ಆರ್‍ಜೆಡಿ ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಇವತ್ತು ಬಿಜೆಪಿ ಜೊತೆ ಕೈಜೋಡಿಸಿ, 6ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನಿತೀಶ್ ಜೊತೆಗೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಉಭಯ ಮುಖಂಡರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಶನಿವಾರದಂದು ನಿತೀಶ್ ಕುಮಾರ್ ವಿಶ್ವಾಸ ಮತ ಗಳಿಸಿದ ನಂತರ ಇತರೆ ಸಚಿವರು ಪ್ರಮಾವಚನ ಸ್ವೀಕರಿಸಲಿದ್ದಾರೆ.
Advertisement
Nitish Kumar and Sushil Modi sworn in as Chief Minister and Deputy CM of Bihar respectively, at Raj Bhawan in Patna. pic.twitter.com/r2Ar9oSPva
— ANI (@ANI) July 27, 2017
Advertisement
Sushil Modi takes oath as the Deputy Chief Minister of Bihar, at Raj Bhawan in Patna. pic.twitter.com/2USRd97f9V
— ANI (@ANI) July 27, 2017
Advertisement
Patna: Nitish Kumar sworn-in as Chief Minister of Bihar for the sixth time pic.twitter.com/gZabGGkKdN
— ANI (@ANI) July 27, 2017
Advertisement
ಇಡೀ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಜೊತೆ ಕೈ ಜೋಡಿಸುವ ಮೂಲಕ ನಿತೀಶ್ ಕುಮಾರ್ ತಮಗೆ ವಿಶ್ವಾಸದ್ರೋಹ ಮಾಡಿದ್ದಾರೆ ಅಂತ ಟೀಕಿಸಿದ್ದಾರೆ. ಅಧಿಕಾರಕ್ಕಾಗಿ ಜನ ಏನು ಬೇಕಾದ್ರೂ ಮಾಡ್ತಾರೆ. 3-4 ತಿಂಗಳಿನಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬುದು ನಮಗೆ ಗೊತ್ತಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Satta ke liye vyakti kuch bhi kar jaata hai, koi neeyam, credibility nahin hai: Rahul Gandhi on #NitishKumar pic.twitter.com/8eRvp6hdvV
— ANI (@ANI) July 27, 2017
3-4 mahine se humein pata tha ye planning chal rahi hai. Apne swaarth ke liye vyakti kuch bhi kar jata hai: Rahul Gandhi on #NitishKumar pic.twitter.com/uSaze9FOlP
— ANI (@ANI) July 27, 2017
ಭ್ರಷ್ಟಾಚಾರದ ಆರೋಪ ಹೊತ್ರೂ ತೇಜಸ್ವಿ ಯಾದವ್ ಖುರ್ಚಿ ಬಿಡದ ಕಾರಣಕ್ಕೆ ನೊಂದು ನಿತೀಶ್‍ಕುಮಾರ್ ಬುಧವಾರ ಸಂಜೆ ಮಹಾಘಟಬಂಧನ್ ಮುರಿದುಕೊಂಡಿದ್ರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು.
ಇದೇ ಅದ್ಬುತ ಕ್ಷಣಕ್ಕೆ ಕಾಯುತ್ತಿದ್ದ ಮೋದಿ, ನಿತೀಶ್ ರಾಜೀನಾಮೆ ನೀಡಿದ ಬೆನ್ನಲ್ಲೇ ಟ್ಚಿಟ್ಟರ್‍ನಲ್ಲೇ ಶಹಬ್ಬಾಸ್‍ಗಿರಿ ಕೊಟ್ಟು ಬೆನ್ನು ತಟ್ಟಿದ್ರು. ಆಗಲೇ ಚಿಗುರಿತ್ತು ಬಿಜೆಪಿ ಜೊತೆಗಿನ ಮರುಮೈತ್ರಿ. ಬುಧವಾರ ಸಂಜೆ ನಂತರ ಆದ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಹಾಗೂ ಜೆಡಿಯು ಮುಖಂಡರು ಮಹತ್ವದ ಸಭೆ ನಡೆಸಿ, ಮೈತ್ರಿ ಸರ್ಕಾರ ರಚನೆಗೆ ನಿರ್ಧಾರ ಮಾಡಿದ್ರು. ಜೆಡಿಯು ಹಾಗೂ ಬಿಜೆಪಿ ನಾಯಕರು ರಾತ್ರಿಯೇ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿ 132 ಶಾಸಕರ ಪಟ್ಟಿಯನ್ನೂ ಕೊಟ್ಟಿದ್ದರು.
ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡ್ತಿದ್ರೆ ಆರ್‍ಜೆಡಿ ಏನೂ ಸುಮ್ಮನೇ ಕೂರಲಿಲ್ಲ. ಲಾಲೂ ಪುತ್ರ ತೇಜಸ್ವಿ ಯಾದವ್ ರಾಜಭವನದ ಮುಂದೆ ತಮ್ಮ ಬೆಂಬಲಿಗರ ಜೊತೆ ರಾತ್ರಿಯಿಡೀ ಭಾರೀ ಪ್ರತಿಭಟನೆ ಮಾಡಿದ್ರು. ಐವರು ಶಾಸಕರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿದ್ರು. ಬಳಿಕ ಪ್ರತಿಕ್ರಿಯಿಸಿದ ಅವರು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಅಂದ್ರು.
ಬಿಹಾರ ವಿಧಾನಸಭೆಯ 243 ಸ್ಥಾನಗಳಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದೆ. ಜೆಡಿಯು 71 ಸ್ಥಾನಗಳ ಜೊತೆ ಬಿಜೆಪಿಯ 53 ಶಾಸಕರು ಕೈ ಜೋಡಿಸಿದ್ರೆ ಸರ್ಕಾರ ರಚನೆಗೆ ಯಾವುದೇ ತೊಂದರೆಯಿಲ್ಲ. ಹೀಗಾಗಿ ಬಿಜೆಪಿ ಬಾಹ್ಯ ಬೆಂಬಲ ನೀಡಿ ಸರ್ಕಾರ ರಚನೆಗೆ ಜೈ ಎಂದಿದೆ.
ಲಾಲೂ ಹಾಗೂ ನಿತೀಶ್ ನಡುವೆ ಹೇಗೆ ಮನಸ್ತಾಪ ಶುರುವಾಯ್ತು. ಬಿಹಾರ ರಾಜಕೀಯದ ಗುದ್ದಾಟ ಸಾಗಿದ ಹಾದಿ ಹೇಗಿತ್ತು.
* ಜುಲೈ 12, 2017-ಭ್ರಷ್ಟಚಾರ ಆರೋಪ ಮುಕ್ತವಾಗಿ ಬಂದ್ರೆ ತೇಜಸ್ವಿ ಯಾದವ್ ಅಧಿಕಾರದಲ್ಲಿ ಮುಂದುವರಿಕೆ-ನಿತೀಶ್ ಸ್ಪಷ್ಟನೆ.
* ಜುಲೈ 14, 2017-ರಾಜೀನಾಮೆ ನೀಡೋ ಮಾತೇ ಇಲ್ಲ-ಲಾಲೂ ಹಾಗೂ ತೇಜಸ್ವಿ ಯಾದವ್ ಸ್ಪಷ್ಟನೆ.
* ಜುಲೈ 15, 2017-`ವಿಶ್ವ ಯುವ ಕುಶಾಲ್ ದಿವಸ್’ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಿಂದ ತೇಜಸ್ವಿ ಹೆಸರು ಕಿತ್ತಾಕಿದ ನಿತೀಶ್.
* ಜುಲೈ 22, 2017-ಬಿಹಾರ ಮೈತ್ರಿ ರಾಜಕೀಯ ಸರಿ ಮಾಡಲು ರಾಹುಲ್ ಗಾಂಧಿ ಯತ್ನ, ಆದರೆ ವಿಫಲ.
* ಜುಲೈ 26, 2017-ಯಾವುದೇ ಕಾರಣಕ್ಕೂ ತೇಜಸ್ವಿ ರಾಜೀನಾಮೆ ನೀಡಲ್ಲ-ಲಾಲೂ ಸ್ಪಷ್ಟ ಸಂದೇಶ ರವಾನೆ.
* ಜುಲೈ 26, 2017-ಸಂಜೆ 5 ಗಂಟೆ – ಮಹಾಘಟ್‍ಬಂಧನ್ ಅಂತ್ಯ, ಸಿಎಂ ಸ್ಥಾನಕ್ಕೆ ನಿತೀಶ್‍ಕುಮಾರ್ ರಾಜೀನಾಮೆ.
* ಜುಲೈ 27, 2017- ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ.
Patna: Governor Keshari Nath Tripathi reaches Raj Bhawan; Nitish Kumar's swearing in as Bihar CM to begin pic.twitter.com/hKAwaLJJV1
— ANI (@ANI) July 27, 2017
My decision is in Bihar's interest and for its development: #NitishKumar after being sworn in as Bihar CM pic.twitter.com/qEvuQaQIji
— ANI (@ANI) July 27, 2017
Development will be a priority, will take Bihar to greater heights: Sushil Modi after being sworn-in as Bihar Deputy CM pic.twitter.com/Id6GAyeyyd
— ANI (@ANI) July 27, 2017
BJP tried all tactics to destabilize states where opposition had Government: Mallikarjun Kharge,Congress #NitishKumar pic.twitter.com/2NQ9iK52An
— ANI (@ANI) July 27, 2017