– ಎರಡನೇ ಏಮ್ಸ್ ನಿರ್ಮಾಣಕ್ಕೆ ಪ್ರಧಾನಿ ಅಡಿಪಾಯ
– 12,100 ಕೋಟಿ ರೂ. ಕಾಮಗಾರಿಗೆ ಚಾಲನೆ
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ದರ್ಭಾಂಗಾದಲ್ಲಿ (Darbhanga) ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಸ್ಪರ್ಶಿಸಲು ಯತ್ನಿಸಿದ್ದಾರೆ. ನೀತಿಶ್ ಪಾದಸ್ಪರ್ಶಕ್ಕೆ ಯತ್ನಿಸುತ್ತಿದ್ದಂತೆ ಪ್ರಧಾನಿ ಮೋದಿ ಅವರನ್ನು ತಡೆದಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಕಾರ್ಯಕ್ರಮದಲ್ಲಿ 73 ವರ್ಷದ ನಿತೀಶ್ ಕುಮಾರ್, 74 ವರ್ಷದ ಪ್ರಧಾನಿ ಮೋದಿಯವರ (Narendra Modi) ಪಾದಗಳನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದ್ದಾರೆ. ನಿತೀಶ್ ಈ ವರ್ಷದಲ್ಲಿ ಮೂರನೇ ಬಾರಿಗೆ ಈ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: MUDA Scam | ಬ್ಲ್ಯಾಕ್‌ಮೇಲ್ ಆರೋಪ – ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್
ಕಳೆದ ಜೂನ್‌ನಲ್ಲಿ ನಿತೀಶ್ ಕುಮಾರ್ ಅವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮೋದಿಯವರ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ನವಾಡದಲ್ಲಿ ನಡೆದ ಲೋಕಸಭಾ ಚುನಾವಣಾ ರ‍್ಯಾಲಿಯಲ್ಲಿ ಅವರು ಪ್ರಧಾನಿ ಮೋದಿಯವರ ಪಾದಗಳನ್ನು ಸ್ಪರ್ಶಿಸಿದ್ದರು. ಇದನ್ನೂ ಓದಿ: Chitradurga| ಮನೆ ಕಾಂಪೌಂಡ್ ಒಳಗೆ ನುಗ್ಗಿ ಮಹಿಳೆಯ ಕೊರಳಲ್ಲಿದ್ದ ಸರ ಕದ್ದು ಆರೋಪಿ ಪರಾರಿ
ದರ್ಭಾಂಗಾದಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಹೊಸ ಏಮ್ಸ್ ನಿರ್ಮಾಣಕ್ಕೆ ಅಡಿಪಾಯ ಹಾಕಿದರು ಮತ್ತು ಸುಮಾರು 12,100 ಕೋಟಿ ರೂ. ಮೌಲ್ಯದ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿತೀಶ್ ರಾಜ್ಯವನ್ನು ಪರಿವರ್ತಿಸಿದ್ದಾರೆ. ಜಂಗಲ್ ರಾಜ್ ಹಣೆಪಟ್ಟಿಯಿಂದ ಹೊರತೆಗೆದಿದ್ದಾರೆ ಎಂದು ಶ್ಲಾಘಿಸಿದರು. ಇದೇ ವೇಳೆ ಆರ್‌ಜೆಡಿ ಮತ್ತು ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ
ಬಿಹಾರ ಸಾಕಷ್ಟು ಅಭಿವೃದ್ಧಿಗೆ ಸಾಕ್ಷಿಯಾಗುತ್ತಿದೆ. ಬಿಹಾರದ ಹಿಂದಿನ ಸರ್ಕಾರ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ಎಂದಿಗೂ ತಲೆಕೆಡಿಸಿಕೊಳ್ಳಲಿಲ್ಲ. ಅವರು ಸುಳ್ಳು ಭರವಸೆಗಳನ್ನು ನೀಡಿದರು. ಆದರೆ ನಿತೀಶ್ ಕುಮಾರ್ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ಸುಧಾರಿಸಿದೆ ಎಂದು ಮೋದಿ ಹೇಳಿದರು. ಇದನ್ನೂ ಓದಿ: ಬೀದರ್‌ನಲ್ಲಿ ಚಿತ್ರಾನ್ನ ತಿಂದು ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ