ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬದಲಾಯಿಸಲು ಪಕ್ಷ ಬಯಸಿದೆ ಎಂಬ ವದಂತಿಗಳ ಬಗ್ಗೆ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದು ದಶಕಕ್ಕಿಂತಲೂ ಹೆಚ್ಚು ದಿನಗಳ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರನ್ನು ಬಿಜೆಪಿಯ ಹೆಚ್ಚು ನಂಬಿಗಸ್ಥ ವ್ಯಕ್ತಿಯಾಗಿ ಸುಶೀಲ್ ಕುಮಾರ್ ಮೋದಿ ಅವರು ಕಾಣುತ್ತಿದ್ದಾರೆ. ಜನಾದೇಶದೊಂದಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ನಿತೀಶ್ ಕುಮಾರ್ ಅವರನ್ನು ಯಾವುದೇ ಕಾರಣಕ್ಕೂ ಬದಲಾಯಿಸುವ ಮಾತೇ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯ ರಾತ್ರಿ ದಾಖಲೆಯ 18 ಸಾವಿರ ಫೋನ್ ಕರೆಗಳ ವಿನಿಮಯ
ರಾಜಕೀಯ ಅಸ್ಥಿರತೆಯನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವ ಆಧಾರವಿಲ್ಲದ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಇದೇ ವೇಳೆ ಪ್ರತಿಪಕ್ಷಗಳಿಗೆ ಟಾಂಗ್ ನೀಡಿದರು. ಎನ್‍ಡಿಎ 2020 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಹೋರಾಡಿ ಗೆದ್ದಿದೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!