ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು

Public TV
1 Min Read
shivarajkumar 2

ನ್ನಡದ ಬಹುನಿರೀಕ್ಷಿತ ಸಿನಿಮಾ ‘ಫೈರ್ ಫ್ಲೈ’ (Fire Fly Kannada) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜೊತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಯಕ ಮತ್ತು ನಿರ್ದೇಶಕ ವಂಶಿ (Vamsi) ಸಾರಥ್ಯದಲ್ಲಿ ಮೂಡಿ ಬರ್ತಿರುವ ‘ಫೈರ್ ಫ್ಲೈ’ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

FotoJet 74

ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ‘ಫೈರ್ ಫ್ಲೈ’ ಆಡಿಯೋ ಹಕ್ಕನ್ನು (Audio Rights) ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇದನ್ನೂ ಓದಿ:ಸೆನ್ಸಾರ್ ಮುಗಿಸಿದ ವಿನಯ್ ರಾಜ್ ಕುಮಾರ್ ನಟನೆಯ ‘ಪೆಪೆ’ ಚಿತ್ರ

fire fly kannada

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ (Niveditha Shivarajkumar) ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರುತ್ತಿದ್ದಾರೆ. ವಂಶಿಗೆ ‌’ಲವ್ ಮಾಕ್ಟೈಲ್’ ನಟಿ ರಚನಾ ಇಂದರ್ (Rachana Inder) ನಾಯಕಿಯಾಗಿದ್ದಾರೆ.

ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ.

Share This Article