ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯ ಧಾರ್ಮಿಕ ಕಾರ್ಯಕ್ರಮದಲ್ಲು ಕರ್ನಾಟಕದ ಸುಮಾರು 45 ಜನರ ಭಾಗವಹಿಸಿದ್ದರು ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.
ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಮಾರ್ಚ್ 10 ರಂದು ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಕರ್ನಾಟಕದಿಂದ ಸುಮಾರು 45 ಮಂದಿ ಭಾಗವಹಿಸಿದ್ದರು ಎಂಬ ಮಾಹಿತಿಯಿದೆ. ಶಿರಾದಲ್ಲಿ ಮೃತಪಟ್ಟ ವ್ಯಕ್ತಿಯು ಇವರಲ್ಲೊಬ್ಬರಾಗಿದ್ದರು. #IndiaFightsCornona #COVID19
— B Sriramulu (@sriramulubjp) March 31, 2020
Advertisement
ಟ್ವೀಟ್: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಮಾರ್ಚ್ 10 ರಂದು ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಕರ್ನಾಟಕದಿಂದ ಸುಮಾರು 45 ಮಂದಿ ಭಾಗವಹಿಸಿದ್ದರು ಎಂಬ ಮಾಹಿತಿಯಿದೆ. ಶಿರಾದಲ್ಲಿ ಮೃತಪಟ್ಟ ವ್ಯಕ್ತಿಯು ಇವರಲ್ಲೊಬ್ಬರಾಗಿದ್ದರು. ಹೀಗಾಗಿ, ಪ್ರಾರ್ಥನೆಯಲ್ಲಿ ಭಾಗವಹಿಸಿದವರಿಗೆಲ್ಲಾ ಸೋಂಕು ಹರಡಿರುವ ಸಾಧ್ಯತೆಗಳನ್ನು ತಳ್ಳಿಹಾಕಲಾಗುವುದಿಲ್ಲ. ಹಾಗಾಗಿ ಇವರನ್ನು ಪತ್ತೆ ಮಾಡಿ, ಕ್ವಾರಂಟೈನ್ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ. ಇವರಲ್ಲಿ ಈಗಾಗಲೇ 13 ವ್ಯಕ್ತಿಗಳನ್ನು ಪತ್ತೆಹಚ್ಚಿ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ನಿಗಾವಹಿಸಲಾಗಿದೆ.
Advertisement
ಹೀಗಾಗಿ, ಪ್ರಾರ್ಥನೆಯಲ್ಲಿ ಭಾಗವಹಿಸಿದವರಿಗೆಲ್ಲಾ ಸೋಂಕು ಹರಡಿರುವ ಸಾಧ್ಯತೆಗಳನ್ನು ತಳ್ಳಿಹಾಕಲಾಗುವುದಿಲ್ಲ. ಹಾಗಾಗಿ ಇವರನ್ನು ಪತ್ತೆ ಮಾಡಿ, Quarantine ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ.
ಇವರಲ್ಲಿ ಈಗಾಗಲೇ 13 ವ್ಯಕ್ತಿಗಳನ್ನು ಪತ್ತೆಹಚ್ಚಿ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ನಿಗಾವಹಿಸಲಾಗಿದೆ. #IndiaFightsCornona
— B Sriramulu (@sriramulubjp) March 31, 2020
Advertisement
ಅಲ್ಲಿಗೆ ಆಸ್ಟ್ರೇಲಿಯಾ, ಸಿಂಗಪೂರ್, ದುಬೈ, ಸೌದಿ ಅರೇಬಿಯಾ, ಇಂಡೋನೇಷಿಯಾ ಸೇರಿದಂತೆ ಹಲವು ದೇಶಗಳಿಂದ ಪ್ರವಾಸಿಗರು ಆಗಮಿಸಿದ್ದರು ಎಂಬ ಮಾಹಿತಿ ದೊರೆತಿದೆ. ಉಳಿದ ವ್ಯಕ್ತಿಗಳನ್ನು ಆದಷ್ಟು ಬೇಗ ಗುರುತಿಸಿ, ಅವರನ್ನು ಕ್ವಾರಂಟೈನ್ ಮಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
Advertisement
ಅಲ್ಲಿಗೆ ಆಸ್ಟ್ರೇಲಿಯಾ, ಸಿಂಗಪೂರ್, ದುಬೈ, ಸೌದಿ ಅರೇಬಿಯಾ, ಇಂಡೋನೇಷಿಯಾ ಸೇರಿದಂತೆ ಹಲವು ದೇಶಗಳಿಂದ ಪ್ರವಾಸಿಗರು ಆಗಮಿಸಿದ್ದರು ಎಂಬ ಮಾಹಿತಿ ದೊರೆತಿದೆ. ಉಳಿದ ವ್ಯಕ್ತಿಗಳನ್ನು ಆದಷ್ಟು ಬೇಗ ಗುರುತಿಸಿ, ಅವರನ್ನು Quarantine ಮಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ
— B Sriramulu (@sriramulubjp) March 31, 2020