ನವದೆಹಲಿ: ಉಕ್ರೇನ್‍ನಿಂದ ಬಂದಿರುವ ವಿದೇಶಿ ವೈದ್ಯಕೀಯ ಪದವೀದರರು (Foreign Medical Graduates) ಭಾರತದಲ್ಲಿ ಇಂಟರ್ನ್‌ಶಿಪ್ (internships) ಪೂರ್ಣಗೊಳಿಸಲು ಅವಕಾಶ ನೀಡುವುದಾಗಿ ನ್ಯಾಷನಲ್ ಮೆಡಿಕಲ್ ಕಮಿಷನ್ (NMC) ತಿಳಿಸಿದೆ.
ಭಾರತದಲ್ಲಿ ಇಂಟರ್ನ್‌ಶಿಪ್ ಪೂರ್ಣಗೊಳಿಸಲು ಅರ್ಜಿ ಸಲ್ಲಿಸ ಬಹುದಾಗಿದೆ. ಅಭ್ಯರ್ಥಿಗಳು ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಗ ರಾಜ್ಯ ವೈದ್ಯಕೀಯ ಕೌನ್ಸಿಲ್‍ಗಳು ಪರಿಗಣಿಸುತ್ತದೆ. ಕೊರೊನಾ, ಯುದ್ಧ ಮುಂತಾದ ಕಾರಣಗಳಿಂದ ಇಂಟರ್ನ್‌ಶಿಪ್ ಪೂರ್ಣಗೊಳಿಸಲು ಸಾಧ್ಯವಾಗದೇ ಇರುವ ಕೆಲವು ವಿದೇಶಿ ವೈದ್ಯಕೀಯ ಪದವೀದರರು ಇದ್ದಾರೆ. ಅಂತಹ ವಿದ್ಯಾರ್ಥಿಗಳು ಇಂಟರ್ನ್‌ಶಿಪ್‍ನ್ನು ಭಾರತದಲ್ಲಿ ಪೂರ್ಣಗೊಳಿಸಲು ಕೋರಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲಾಗುವುದು. ಇದಕ್ಕೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಎನ್‌ಎಂಸಿ ತಿಳಿಸಿದೆ. ಇದನ್ನೂ ಓದಿ: ನಾನು ಕೀವ್‍ನಲ್ಲಿದ್ದೇನೆ, ತಪ್ಪಿಸಿಕೊಂಡು ಹೋಗಿಲ್ಲ: ಉಕ್ರೇನ್ ಅಧ್ಯಕ್ಷ
ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಕೋರ್ಸ್‍ನ್ನು ಸ್ಥಳೀಯವಾಗಿ ಖಾಸಗಿ ಕಾಲೇಜುಗಳಲ್ಲಿ ಪೂರ್ಣಗೊಳಿಸಲು ಸಹಕಾರಿಯಾಗಲಿದೆ. ರಾಷ್ಟೀಯ ಪರೀಕ್ಷಾ ಮಂಡಳಿ ನಡೆಸುವ ವಿದೇಶಿ ವೈದ್ಯಕೀಯ ಅರ್ಹತಾ ಪರೀಕ್ಷೆ(ಎಫ್‍ಎಂಜಿಇ)ಯನ್ನು ಅಭ್ಯರ್ಥಿಗಳು ಪೂರ್ಣಗೊಳಿಸಿರುವುದನ್ನು ರಾಜ್ಯ ವೈದ್ಯಕೀಯ ಕೌನ್ಸಿಲ್‍ಗಳು ಖಾತರಿ ಪಡಿಸಿಕೊಳ್ಳಬೇಕು. ಅಭ್ಯರ್ಥಿಯು ಎಲ್ಲಾ ಮಾನದಂಡಗಳನ್ನು ಪೂರ್ಣಗೊಳಿಸಿದ್ದರೆ 12 ತಿಂಗಳ ಇಂಟರ್ನ್‌ಶಿಪ್ ಅಥವಾ ಉಳಿದ ಅವಧಿಯನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಎನ್‍ಎಂಸಿ ಹೇಳಿದೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟಿನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ